ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪತಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

Husband

ಬೆಂಗಳೂರು, ಜೂ.27- ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪತಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಒಡಿಸ್ಸಾದ ಕೈಲಾಸ್‍ಚಂದ್ರ ಬೇಹರ(28) ಬಂಧಿತ ಆರೋಪಿ.  ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿ ನಲ್ಲಿ ಕೈಮಗ್ಗ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿ ಕೈಲಾಸಚಂದ್ರ ಐದು ವರ್ಷದ ಹಿಂದೆ ಒಡಿಸ್ಸಾದ ಮಾಲತಿಸಾಹು(21) ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು.

ದಂಪತಿಗೆ ಎರಡೂವರೆ ವರ್ಷದ ಮಗುವಿದ್ದು, ಒಡಿಸ್ಸಾದ ಮಾಲತಿ ಪೊೀಷಕರೇ ಈ ಮಗುವನ್ನು ನೋಡಿಕೊಳ್ಳುತ್ತಿದ್ದಾರೆ. ಆರೋಪಿ ಕೈಲಾಸಚಂದ್ರ ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದನು. ಈ ನಡುವೆ ಕೌಟುಂಬಿಕ ವಿಷಯವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.  ಜೂ.19ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಪತ್ನಿಯೊಂದಿಗೆ ಜಗಳವಾಡಿ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆಮಾಡಿ ಮನೆ ಬೀಗ ಹಾಕಿಕೊಂಡು ಆರೋಪಿ ಪರಾರಿಯಾಗಿದ್ದನು. ಮನೆ ಮಾಲೀಕರಾದ ಮುನಿಯಪ್ಪ ಎಂಬುವರು ನೀಡಿದ ದೂರಿನ ಮೇರೆಗೆ ಒಡಿಸ್ಸಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Facebook Comments

Sri Raghav

Admin