ಹೈದ್ರಾಬಾದ್ ಪಾಲಿಕೆ ಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಹೈದ್ರಾಬಾದ್, ನ.27- ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಎಲ್ಲಾ ಚುನಾವಣೆಗಳಲ್ಲೂ ಭರ್ಜರಿ ಗೆಲುವು ಸಾಸುತ್ತಿರುವ ಬಿಜೆಪಿ ಈಗ ದಕ್ಷಿಣ ಭಾರತವನ್ನು ಸಂಪೂರ್ಣ ಕೇಸರಿಮಯ ಮಾಡುವತ್ತ ಹೆಜ್ಜೆ ಇಟ್ಟಿದೆ. ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದ್ರಾವಿಡ ನಾಡಿನಲ್ಲೂ ಕಮಲವನ್ನು ಅರಳಿಸಲು ಈಗಾಗಲೇ ಕಾರ್ಯತಂತ್ರ ರೂಪಿಸಿರುವ ಬಿಜೆಪಿ ಮುಖಂಡರು, ಹೈದ್ರಾಬಾದ್‍ನ ಮಹಾನಗರ ಪಾಲಿಕೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸುತ್ತಿದ್ದಾರೆ.

ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಸುವ ಛಲ ತೊಟ್ಟಿರುವ ಬಿಜೆಪಿ ಪಕ್ಷವು ಮಹಿಳಾ ಮತದಾರರಿಗೆ ಭರ್ಜರಿ ಗಿಫ್ಟ್ ಕೊಡಲು ಮುಂದಾಗಿದೆ. ನವದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನಾಯಕತ್ವದ ಎಎಪಿ ಅಧಿಕಾರಕ್ಕೆ ಬರಲು ಬಳಸಿದ ಲಾಜಿಕ್‍ಗಳನ್ನೇ ಜಾರಿಗೆ ತರಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ.

ಒಂದು ವೇಳೆ ಬಿಜೆಪಿ ಪಾಲಿಕೆ ಚುನಾವಣೆಯಲ್ಲಿ ಗೆದ್ದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್, ಮೆಟ್ರೋದಲ್ಲಿ ಉಚಿತ ಪ್ರಯಾಣ, 100 ಯೂನಿಟ್‍ಗಳವರೆಗೆ ವಿದ್ಯುತ್ ಉಚಿತ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಟ್ಯಾಬ್, ಪ್ರತಿ ವರ್ಷ 3 ಮಹಿಳಾ ಠಾಣೆಗಳ ಸ್ಥಾಪನೆ, ಕಿಲೋಮೀಟರ್‍ಗೆ ಒಂದು ಶೌಚಾಲಯ, ಕುಡಿಯುವ ನೀರಿನ ಪೂರೈಕೆ, ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡವರಿಗೆ ಒಂದು ಲಕ್ಷ ಮನೆಗಳ ನಿರ್ಮಾಣ ಅಲ್ಲದೆ ಇತ್ತೀಚೆಗೆ ಪ್ರವಾಹದಲ್ಲಿ ಸೂರು ಕಳೆದುಕೊಂಡ ಕುಟುಂಬಕ್ಕೆ 25 ಸಾವಿರ ರೂ. ಸಹಾಯ ಧನ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ಪ್ರಣಾಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಿಡುಗಡೆ ಮಾಡಿದರು.

Facebook Comments