2 ಹುಂಡೈ ಕಾರು ಕದ್ದಿದ್ದ ವ್ಯಕ್ತಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.21- ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿದ್ದ ಕುಂಬಳಗೋಡು ನಿವಾಸಿಯನ್ನು ಚಂದ್ರಾ ಲೇಔಟ್ ಠಾಣೆ ಪೆÇಲೀಸರು ಬಂಸಿದ್ದಾರೆ. ಮಹಮ್ಮದ್ ಮುಜಾಮಿಲ್ (36) ಬಂತ ಆರೋಪಿ. ಈತನಿಂದ 5.15 ಲಕ್ಷ ರೂ. ಬೆಲೆಯ 2 ಹುಂಡೈ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಸೆ.15ರಂದು ರಾತ್ರಿ ವ್ಯಕ್ತಿಯೊಬ್ಬರು ತಮ್ಮ ಮನೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಹುಂಡೈ ಎಕ್ಸಂಟ್ ಕಾರನ್ನು ನಿಲ್ಲಿಸಿದ್ದರು. ಮೂರನೆ ದಿನ ನೊಡಿದಾಗ ಕಾರು ಕಳ್ಳತನವಾಗಿತ್ತು. ಈ ಬಗ್ಗೆ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಇನ್‍ಸ್ಪೆಕ್ಟರ್ ಬ್ರಿಜೇಶ್ ಮ್ಯಾಥ್ಯೂ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾರುಕಳ್ಳನನ್ನು ಬಂಸಿ ಚಂದ್ರಾ ಲೇಔಟ್ ಮತ್ತು ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ 2 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments