ಅಗಲಿದ ನಾಯಕನನ್ನು ನೆನೆದು ಭಾವುಕರಾದ ಬಿಜೆಪಿ ನಾಯಕರು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.24- ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ನಿಧನರಾಗಿ ಇಂದಿಗೆ ವರ್ಷ ಕಳೆದಿದ್ದು, ಈ ಪುಣ್ಯಸ್ಮರಣೆಯಂದು ಬಿಜೆಪಿ ಅಗಲಿದ ನಾಯಕನಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದೆ.

ಅರುಣ್ ಜೇಟ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿ, ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನನಗೆ ಅವರ ನೆನಪು ಸದಾ ಕಾಡುತ್ತದೆ ಎಂದು ಪ್ರಧಾನಿ ಮೋದಿ ಭಾವುಕರಾಗಿ ನುಡಿದಿದ್ದಾರೆ.

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಮೊದಲ ಪಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿರುವ ಅವರು, ಕಳೆದ ವರ್ಷ ಇದೇ ದಿನ ಅರುಣ್ ಜೇಟ್ಲಿ ಅವರನ್ನು ಕಳೆದುಕೊಂಡಿದ್ದೇವೆ. ಕೇಂದ್ರ ಹಣಕಾಸು ಸಚಿವರಾಗಿ ಅತ್ಯಂತ ಶ್ರದ್ದೆಯಿಂದ, ಪ್ರಮಾಣಿಕವಾಗಿ ಕೆಲಸ ನಿರ್ವಹಿಸಿದ್ದರು. ಅವರ ನೆನಪು ತುಂಬ ಕಾಡುತ್ತದೆ ಎಂದು ಹೇಳಿದ್ದಾರೆ.

ಅರುಣ್ ಜೇಟ್ಲಿ ಅವರದು ಬಹುಮುಖ ಪ್ರತಿಭೆಯ ವ್ಯಕ್ತಿತ್ವ. ವಿವಿಧ ಸ್ತರಗಳಲ್ಲಿ ವಿಭಿನ್ನವಾಗಿ ರಾಷ್ಟ್ರದ ಸೇವೆ ಸಲ್ಲಿಸಿದವರು ರಾಜಕಾರಣಿಯಾಗಿ, ವಕೀಲರಾಗಿ ತಮ್ಮ ಸಾರ್ವಜನಿಕ ಜೀವನದಲ್ಲೂ ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸ್ಮರಿಸಿಕೊಂಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಕೂಡ ಟ್ವೀಟ್ ಮಾಡಿದ್ದು, ಅರುಣ್‍ಜೇಟ್ಲಿ ಅವರು ಪಕ್ಷದ ವಿವಿಧ ವಿಷಯಗಳ ಬಗ್ಗೆ ಧ್ವನಿಯಾಗಿದ್ದರು ಮತ್ತು ಮುಖ್ಯ ಸಂದರ್ಭಗಳಲ್ಲಿ ಟ್ರಬಲ್ ಶೂಟರ್ ಆಗಿ ಕೆಲಸ ಮಾಡಿದ್ದರು. ಎಂದು ಸ್ಮರಿಸಿಕೊಂಡಿದ್ದಾರೆ.

ಅರುಣ್ ಜೇಟ್ಲಿ ಅವರು ಮೋದಿ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೀರ್ಘಕಾಲದ ಅನಾರೋಗ್ಯದ ವಿರುದ್ಧ ಹೋರಾಡಿ ತಮ್ಮ 66 ನೇ ವಯಸ್ಸಿನಲ್ಲಿ ನಿಧನರಾಗಿದ್ದರು.

Facebook Comments

Sri Raghav

Admin