ಪೊಲೀಸರಿಗೆ ದೂರು ನೀಡಿದ ಐಎಎಸ್ ಅಧಿಕಾರಿ ಜ್ಯೋತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4- ಐಎಎಸ್ ಅಧಿಕಾರಿ ಜ್ಯೋತಿ ಅವರು ನೀಡಿರುವ ದೂರಿನ ಬಗ್ಗೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಇದು ಆಡಳಿತಾತ್ಮಕ ವಿಷಯ. ಆದ್ದರಿಂದ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಐಎಎಸ್ ಅಧಿಕಾರಿ ಜ್ಯೋತಿ ಅವರು ಕರ್ತವ್ಯ ನಿರ್ವ ಹಿಸುತ್ತಿ ದ್ದಾರೆ. ಈ ನಡುವೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) , ಸಂಸ್ಕøತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಅವರನ್ನು ಇವರ ಸ್ಥಾನಕ್ಕೆ ನೇಮಿಸಿತ್ತು.

ಐಎಎಸ್ ಅಧಿಕಾರಿ ಜ್ಯೋತಿ ಅವರು ಅಧಿಕಾರ ಹಸ್ತಾಂತರಿಸದಿದ್ದರೂ ಕೊಟ್ರೇಶ್ ಅವರು ಇವರ ಕಚೇರಿಗೆ ಅಧಿನಕೃತವಾಗಿ ಪ್ರವೇಶಿಸಿ ಕರ್ತವ್ಯ ನಿರ್ವಹಿಸಿದ್ದರಿಂದ ಜ್ಞಾನಭಾರತಿ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದಾರೆ.

ನಾನು ಈವರೆಗೂ ಅಧಿಕಾರ ಹಸ್ತಾಂತರಿಸಿಲ್ಲ. ಮುಂದಿನ ಕ್ರಮದ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸರ್ಕಾರದ ನಿರ್ದೇಶನದ ಮೇರೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಜ್ಯೋತಿ ಸ್ಪಷ್ಟಪಡಿಸಿದ್ದಾರೆ.

ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿರುವುದರಿಂದ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.

Facebook Comments