ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ನಕಾರ : ಎಚ್‍ಡಿಕೆ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.13- ಕನ್ನಡಿಗರ ಹಲವು ವರ್ಷದ ಬೇಡಿಕೆ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟರ್‍ನಲ್ಲಿ ಟೀಕಿಸಿರುವ ಅವರು, ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ತಂದು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ಕೋರಲಾಗಿತ್ತು. ಆದರೆ ಅದಕ್ಕೆ ಅವಕಾಶ ನೀಡಿಲ್ಲ. ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಮಲತಾಯಿ ಧೋರಣೆಗೆ ಇದು ಸಾಕ್ಷಿಯಾಗಿದ್ದು, ಖಡಾಖಂಡಿತವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ.

Facebook Comments