ಎಲ್‌ಒ‌ಸಿ ಬಳಿ ಟ್ರಕ್‍ನಲ್ಲಿ ಹೋಗುತ್ತಿದ್ದಾಗ ಸ್ಫೋಟ : ಯೋಧ ಹುತಾತ್ಮ, ಇಬ್ಬರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ನ.18- ಗಡಿ ನಿಯಂತ್ರಣ ರೇಖೆ (ಎಲ್‌ಒ‌ಸಿ) ಬಳಿ ವಸ್ತುವೊಂದು ಸ್ಫೋಟಗೊಂಡಿದ್ದು, ಯೋಧರೊಬ್ಬರು ಹುತಾತ್ಮರಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ನಿನ್ನೆ ಸಂಜೆ ಅಖ್ನೂರ್ ಸೆಕ್ಟರ್ ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡಿದೆ.

ಈ ವೇಳೆ ಅಲ್ಲಿ ಟ್ರಕ್‍ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯೋಧರಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಧಂಪುರ್ ಪ್ರದೇಶದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Facebook Comments