ಹೆದ್ದಾರಿಯಲ್ಲಿ ಸ್ಫೋಟಕ ಪತ್ತೆ, ಉಗ್ರರ ವಿಧ್ವಂಸಕ ಕೃತ್ಯ ವಿಫಲ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಸೆ.7- ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ವಿಧ್ವಂಸಕ ಕೃತ್ಯ ಎಸಗಲು ನಿರಂತರ ಪ್ರಯತ್ನ ಮುಂದುವರೆಸಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸುಧಾರಿತ ಸ್ಫೋಟಕ (ಐಇಡಿ) ಭದ್ರತಾ ಪಡೆಗಳು ಪತ್ತೆ ಮಾಡಿ ನಿಷ್ಕ್ರಿಯಗೊಳಿಸಿವೆ.

ಇದರಿಂದಾಗಿ ಭಯೋತ್ಪಾದಕರ ಮತ್ತೊಂದು ವಿಧ್ವಂಸಕ ಕೃತ್ಯ ವಿಫಲಗೊಂಡಂತಾಗಿದೆ. ಡ್ರಗ್ ಮುಲ್ಲಾ ಪ್ರದೇಶದ ಸೋಫೋರ್-ಕುಪ್ವಾರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಮರಳು ಚೀಲದಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕವನ್ನು ಭದ್ರತಾ ಪಡೆಗಳು ಪತ್ತೆ ಮಾಡಿವೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ಐಇಡಿಯನ್ನು ನಿಷ್ಕ್ರಿಯಗೊಳಿಸಿತು ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

Facebook Comments