ಐಐಎಸ್‍ಸಿ ಸಾಧನೆಗೆ ಸಿಎಂ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು,ಜೂ.10-ಅಂತಾರಾಷ್ಟ್ರೀಯ ಏಜೆನ್ಸಿ ನಡೆಸಿರುವ ಸಮೀಕ್ಷೆಯಲ್ಲಿ ನಗರದ ಭಾರತೀಯ ವಿಜ್ಞಾನ ಸಂಸ್ಥೆ ವಿಶ್ವದ ಅತ್ಯುತ್ತಮ ಸಂಶೋಧನಾ ವಿಶ್ವವಿದ್ಯಾಲಯವಾಗಿ ಹೊರ ಹೊಮ್ಮಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಐಐಎಸ್‍ಸಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಕ್ಯೂಎಸ್ ಸಂಸ್ಥೆ ನಡೆಸಿರುವ ಸಮೀಕ್ಷೆಯಲ್ಲಿ ಐಐಎಸ್‍ಸಿ ವಿಶ್ವದ ಅತ್ಯುತ್ತಮ ಸಂಶೋಧನಾ ವಿವಿಯಾಗಿ ಹೊರಹೊಮ್ಮಿರುವುದನ್ನು ಟ್ವಿಟ್ ಮಾಡಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜ್ಞಾನ, ತಂತ್ರಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಐಐಎಸ್‍ಸಿ ಮಾಡಿರುವ ಸಾಧನೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡಬೇಕಾದ ವಿಷಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Facebook Comments

Sri Raghav

Admin