ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ನಡುವೆ ಅಕ್ರಮ‌ ಮದ್ಯದ ಘಮಲು

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ; ದೇಶದಲ್ಲಿ ಲಾಕ್ ಡೌನ್ ನಿಯಮ ಜಾರಿಯಲ್ಲಿದೆ ಆದರೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಕೆಪಿಸಿಸಿ ಸದಸ್ಯ ಎಚ್.ಕೆ. ಮಹೇಶ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜಾರೋಷವಾಗಿ ಮದ್ಯ ಮಾರಾಟವಾಗುತ್ತಿದೆ ಅಕ್ರಮ ಮದ್ಯ ಮಾರಾಟದಲ್ಲಿ ಸ್ಥಳೀಯ ಶಾಸಕರು- ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಲಾಕ್ ಡೌನ್ ಘೋಷಣೆ ಮಾಡಿ ಒಂದು ತಿಂಗಳು ಕಳೆಯುತ್ತ ಬಂದಿದೆ ಆದರೆ ಅಕ್ರಮ ಮದ್ಯ ಮಾರಾಟ ಇದುವರೆಗೂ ತಹಬದಿಗೆ ಬಂದಿಲ್ಲ ಇದನ್ನು ಗಮನಿಸಿದರೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆಂದು ಗೊತ್ತಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಮಾಧು ಸ್ವಾಮಿಯವರು ಪ್ರತಿ ಸಭೆಯಲ್ಲೂ ಅಕ್ರಮ ಮದ್ಯ ಮಾರಾಟ ಕಡಿವಾಣ ಹಾಕುವ ಬಗ್ಗೆ ಮಾತನಾಡುತ್ತಾರೆ ಆದರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ನಿರಂತರವಾಗಿದೆ ಇದನ್ನು ಕಡಿವಾಣ ಹಾಕುವ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಅಕ್ರಮ ಮದ್ಯ ಮಾರಾಟ ತಡೆಯಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಕಾರ್ಯಕರ್ತರ ಬಳಿ ಅಕ್ರಮ ಮಧ್ಯ ದೊರೆಯುತ್ತಿದ್ದು ಶಾಸಕರ ಬೆಂಬಲ ಇರುವಾಗ ನಮಗೆ ಯಾವ ಭಯ ಎಂದು ಹೇಳುತ್ತಿದ್ದಾರೆ…!!. ಅಲ್ಲದೆ ವಿಜಯನಗರದಲ್ಲಿ ಅಕ್ರಮ ಮದ್ಯ ಮಾರಾಟವಾಗುವುದನ್ನು ಕಂಡ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಹೋದಾಗ ಅಕ್ರಮ ಮಧ್ಯ ದೊರೆತಿದ್ದು ಅಕ್ರಮ ಮದ್ಯ ಮಾರಾಟಕ್ಕೆ ಪುಷ್ಟಿ ನೀಡಿದೆ ಎಂದು ಮಹೇಶ ಆರೋಪಿಸಿದರು.

Facebook Comments

Sri Raghav

Admin