ಅಕ್ರಮ ಮರಳು ಗಣಿಗಾರಿಕೆ ತಡೆಯದ 17 ಅಧಿಕಾರಿಗಳು ಅಮಾನತು

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ,ಜು.28-ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಗ್ರಹಕ್ಕೆ ಕ್ರಮ ಕೈಗೊಳ್ಳದ 17 ಮಂದಿ ಹಿರಿಯ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿತೀಶ್‍ಕುಮಾರ್ ಅಮಾನತುಗೊಳಿಸಿದ್ದಾರೆ. ಔರಂಗಾಬಾದ್ ಎಸ್‍ಪಿ ಸುಧೀರ್‍ಕುಮಾರ್, ಭೋಜ್‍ಪುರ್ ಎಸ್‍ಪಿ ರಾಕೇಶ್‍ಕುಮಾರ್ ದುಬೆ ಸೇರಿದಂತೆ 17 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಆರು ಮಂದಿ ಮೋಟಾರ್ ವೆಹಿಕಲ್ ಪರಿವೀಕ್ಷಕರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಆರು ಮಂದಿ ಅಧಿಕಾರಿಗಳು ಸೇರಿದಂತೆ 17 ಮಂದಿ ಅಧಿಕಾರಿಗಳು ಶಿಕ್ಷೆಗೊಳಗಾಗಿದ್ದಾರೆ.

ನದಿ ತೀರಗಳಲ್ಲಿ ಮರಳು ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಆದರೂ ಸೋನೆ ನದಿ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರ್ಥಿಕ ಅಪರಾಧ ಘಟಕ ನೀಡಿದ ವರದಿಯನ್ನಾಧರಿಸಿ ನಿತೀಶ್ ಈ ಕ್ರಮ ಕೈಗೊಂಡಿದ್ದಾರೆ.

Facebook Comments