ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ, ಸಿಬಿಐಗೆ ಸುಪ್ರೀಂ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.24 (ಪಿಟಿಐ)- ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಐದು ರಾಜ್ಯಗಳಿಗೆ ನೋಟಿಸ್‍ಗಳನ್ನು ನೀಡಿದ್ದು ಪ್ರತ್ಯುತ್ತರ ಕೋರಿದೆ.

ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ಕೇಂದ್ರ, ಮತ್ತು ಸಿಬಿಐ ಹಾಗೂ ತಮಿಳುನಾಡು, ಪಂಜಾಬ್, ಮಧ್ಯಪ್ರದೇಶ, ಮಹರಾಷ್ಟ್ರ ಮತ್ತು ಆಂಧ್ರಪ್ರದೇಶ-ಈ ಐದು ರಾಜ್ಯಗಳಿಗೆ ನೋಟಿಸ್‍ಗಳನ್ನು ನೀಡಿದೆ.

ಈ ಐದು ರಾಜ್ಯಗಳಲ್ಲಿ ಅವ್ಯಾಹತ ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ಪರಿಸರ ಅವನತೆಗೆ ಕಾರಣವಾಗಿದೆ ಎಂದು ಆರೋಪಿಸಿ ಸೂಕ್ತ ಕ್ರಮಕ್ಕಾಗಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.  ಈ ರಾಜ್ಯಗಳಲ್ಲಿ ಅಗತ್ಯ ಪರಿಸರ ರಕ್ಷಣೆ ಅನುಮತಿ ಇಲ್ಲದೇ ಅಕ್ರಮ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ಪ್ರಣವ್ ಸಚ್‍ದೇವ್ ವಾದ ಮಂಡಿಸಿದರು.

ಅರ್ಜಿಯಲ್ಲಿ ಉಲ್ಲೇಖಿಸಲಾಗಿರುವ ಮರಳು ಗಣಿಗಾರಿಕೆ ಹಗರಣಗಳ ಬಗ್ಗೆಯೂ ದೂರುಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

Facebook Comments