6.50 ಕೋಟಿ ರೂ.ಮೌಲ್ಯದ ಅಕ್ರಮ ಮರಳು, ವಾಹನ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಥಾಣೆ,ಜ.14- ಮಹಾರಾಷ್ಟ್ರದ ಥಾಣೆ ಜಿಲ್ಲೆಯ 4 ಪ್ರತ್ಯೇಕ ಸ್ಥಳಗಳಲ್ಲಿ ನಿನ್ನೆ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು 6.50 ಕೋಟಿ ರೂ. ಮೌಲ್ಯದ ಭಾರೀ ಪ್ರಮಾಣದ ಅಕ್ರಮ ಮರಳು, ವಾಹನಗಳು ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಥಾಣೆ ನಗರ, ಬಿವಿಂಡಿ, ಕಲ್ಯಾಣ್ ಮತ್ತು ಶಹಪುರ್ ತಾಲ್ಲೂಕುಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಹೆಚ್ಚುವರಿ ಜಿಲ್ಲಾ ಕಲಕ್ಟರ್ ವೈದೇಹಿ ಪಾಂಡೆ ಮಾಹಿತಿ ನೀಡಿದ್ದಾರೆ.  ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಮುಂದುವರೆದ ಕಾರ್ಯಚರಣೆಯಲ್ಲಿ ಒಟ್ಟು 6.50 ಕೋಟಿ ರೂ. ಮೌಲ್ಯದ ಅಕ್ರಮ ಮರಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

32 ಸಕ್ಷನ್ ಪಂಪ್‍ಗಳು, 25 ಬಾರ್ಜ್‍ಗಳು, 50 ಕಲೆಕ್ಷನ್ ಟ್ರಕ್‍ಗಳು ಮತ್ತು 33 ಬ್ರಾಸ್ ಪ್ರಮಾದಷ್ಟು ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ವೈದೇಹಿ ತಿಳಿಸಿದ್ದಾರೆ.

Facebook Comments