ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ ಎಸ್‍ಐಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.18- ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ಎಐಎಂ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ದುಬೈನಲ್ಲಿದ್ದಾನೆ ಎಂದು ತಿಳಿದುಬಂದಿದೆ.  ಆತನನ್ನು ಅಲ್ಲಿಂದ ಬೆಂಗಳೂರು ನಗರಕ್ಕೆ ಕರೆತರಲು ಎಸ್‍ಐಟಿ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಮನ್ಸೂರ್ ಖಾನ್ ದುಬೈಗೆ ತೆರಳಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಯನ್ನು ಎಸ್‍ಐಟಿ ಪರಿಶೀಲನೆ ನಡೆಸಿದೆ.

ಒಟ್ಟಾರೆ ಮನ್ಸೂರ್ ದುಬೈಗೆ ತೆರಳಿದ್ದಾರೆಂಬ ಶಂಕೆ ಹಿನ್ನೆಲೆಯಲ್ಲಿ ಆತನನ್ನು ಕರೆತರಲು ಬೇಕಾದ ಅಗತ್ಯ ಎಲ್ಲಾ ದಾಖಲೆಗಳನ್ನು ಎಸ್‍ಐಟಿ ಸಂಗ್ರಹಿಸುತ್ತಿದ್ದು, ಈಗಾಗಲೇ ಮಹತ್ವದ ವಿವರಗಳನ್ನು ಕಲೆ ಹಾಕಿದೆ. ಈ ನಡುವೆ ಮನ್ಸೂರ್ ಖಾನ್ ಅವರ ಸಂಬಂಧಿಕರ ಮನೆಗಳ ಮೇಲೆ ಎಸ್‍ಐಟಿ ದಾಳಿ ಮಾಡಿ ಹಲವು ಮಹತ್ವದ ದಾಖಲೆ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ.

ದಾಳಿ ವೇಳೆ ತನಿಖೆಗೆ ಅಗತ್ಯವಿರುವ ದಾಖಲೆಗಳು ಸಹ ಲಭ್ಯವಾಗಿದೆ. ಈಗಾಗಲೆ ಎಸ್‍ಐಟಿ ಏಳು ಮಂದಿ ಐಎಂಎ ನಿರ್ದೇಶಕರಿಂದ ಹಲವು ಮಹತ್ವದ ಮಾಹಿತಿಗಳನ್ನು ಪಡೆದು ಕೊಂಡಿದೆ.

ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವವರು ಇಂದೂ ಸಹ ದೂರು ನೀಡುತ್ತಿದ್ದು, ದೂರದಾರರ ಸಂಖ್ಯೆ 42 ಸಾವಿರಕ್ಕೆ ಏರುವ ಸಾಧ್ಯತೆ ಇದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ