ಬಿಎಸ್ವೈ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಐಟಿ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ‌​ ಮಾಡಿದ್ದು, ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಅಕ್ರಮ ಎಸಗಿರುವುದು ದೃಢಪಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ.
8.67 ಕೋಟಿ ಮೊತ್ತದ ಚಿನ್ನ, 29.83 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಲಸಂಪನ್ಮೂಲ ಇಲಾಖೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಆರೋಪದಡಿ ಕಳೆದ‌ ವಾರ ಮೂವರು ಗುತ್ತಿಗೆದಾರರ ಮೇಲೆ ನಡೆದಿದ್ದ ಐಟಿ ಅಧಿಕಾರಿಗಳ ದಾಳಿಯಲ್ಲಿ‌ ಸುಮಾರು 750 ಕೋಟಿ ರೂ.ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಮುಖ್ಯವಾಗಿ ನೀರಾವರಿ ಇಲಾಖೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಕೋಟ್ಯಂತರ ತೆರಿಗೆ ವಂಚನೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ಮೂವರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು.‌

ದಾಳಿಯಲ್ಲಿ ಮಹತ್ವದ ದಾಖಲಾತಿ, ಆಸ್ತಿಪತ್ರ, ನಕಲಿ ಬಿಲ್ ಜಪ್ತಿ ಮಾಡಿಕೊಂಡು‌ ಪರಿಶೀಲಿಸಿದಾಗ ಮೂವರು ಗುತ್ತಿಗೆದಾರರು ಒಟ್ಟು 750 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಈ ಪೈಕಿ 487 ಕೋಟಿ ರೂಪಾಯಿ ಅಕ್ರಮ ಎಂದು ಗುತ್ತಿಗೆದಾರರು ಒಪ್ಪಿಕೊಂಡಿದ್ದಾರೆ.ಇನ್ನುಳಿದ‌ ಹಣ ಬಗ್ಗೆ ಅಧಿಕಾರಿಗಳು ತನಿಖೆ‌ ಮುಂದುವರೆಸಿದ್ದಾರೆ.

ದಾಳಿ ವೇಳೆ ಮೂರು ಕಂಪನಿಗಳು ನಕಲಿಯಾಗಿ ಖರೀದಿ ಮಾಡಿ ಕೆಲಸ ಮಾಡಿದ್ದಾಗಿ ದಾಖಲೆಗಳನ್ನು ಸೃಷ್ಟಿ ಮಾಡಿ ಲಾಭ ಗಳಿಸುರುವುದು ಪತ್ತೆಯಾಗಿದೆ. ನಕಲಿಯಾಗಿ ಕಾರ್ಮಿಕ ವೆಚ್ಚ, ನಕಲಿಯಾಗಿ ಬೋಗಸ್ ಸಬ್ ಕಂಟ್ರಾಕ್ಟ್ ಗಳು ಮಾಡಿರೊದು ಪತ್ತೆಯಾಗಿದೆ.

ಒಂದು ಕಂಪನಿಗೆ ಸಂಬಂಧಿಸಿದಂತೆ ಇಲ್ಲದ 40 ವ್ಯಕ್ತಿಗಳ ಹೆಸರಲ್ಲಿ ಸಬ್ ಕಾಂಟ್ರಾಕ್ಟ್ ವೆಚ್ಚ ಸೃಷ್ಟಿ ಮಾಡಿರುವುದು ಪತ್ತೆಯಾಗಿದೆ. ಜತೆಗೆ ವಿಚಾರಣೆ ವೇಳೆ ನಕಲಿಯಾಗಿ ದಾಖಲೆಗಳನ್ನು ಸೃಷ್ಟಿ ಮಾಡಿರುವುದಾಗಿ ಐಟಿ ಇಲಾಖೆಯ ಅಧಿಕಾರಿಗಳ ಮುಂದೆ ಸಬ್ ಕಾಂಟ್ರಾಕ್ಟರ್ಗಳು ಒಪ್ಪಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಕಾರ್ಮಿಕರ ಹೆಸರಲ್ಲಿ ನೂರಾರೂ ಕೋಟಿ ವಂಚನೆ ಎಸಗಿರುವುದು ಗೊತ್ತಾಗಿದೆ. ಕಾರ್ಮಿಕರ ಹೆಸರಿನಲ್ಲಿ ಸಂಬಳ ಹಾಗೂ 40 ಜನರ ಹೆಸರಿನಲ್ಲಿ ಬೋಗಸ್ ಉಪಗುತ್ತಿಗೆದಾರರನ್ನು ಸೃಷ್ಟಿಸಿ ಗೋಲ್​ಮಾಲ್ ಮಾಡಲಾಗಿದೆ‌.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆ ಮೇಲೆ ದಾಳಿ ನಡೆದ ಕಾರಣ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿತ್ತು.

Facebook Comments

Sri Raghav

Admin