ಭಾರತದಲ್ಲಿ ಮುಂದುವರೆದ ಕೊರೊನಾ ರಣಕೇಕೆ : ಒಂದೇ ದಿನ 1.26ಲಕ್ಷ ಮಂದಿಗೆ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಏ.8-ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1.26,789 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದ ಹಲವು ದಿನಗಳಿಂದ ಲಕ್ಷದ ಲೆಕ್ಕದಲ್ಲಿ ಸೋಂಕು ಪತ್ತೆಯಾಗುತ್ತಿರುವುದರಿಂದ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.29 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಮಹಾಮಾರಿಗೆ ನಿನ್ನೆಯಿಂದ 685 ಮಂದಿ ಬಲಿಯಾಗುವ ಮೂಲಕ ಸಾವಿನ ಪ್ರಮಾಣ 1,66,862ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಸಕ್ರಿಯ ಸೋಂಕಿತರ ಪ್ರಮಾಣ 9,10,319ಕ್ಕೆ ಹೆಚ್ಚಾಗಿದ್ದು, ಚೇತರಿಕೆ ಪ್ರಮಾಣ ಶೇ.91.67ಕ್ಕೆ ಕುಸಿದಿದೆ.

Facebook Comments