ಭಾರತ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತಿದೆ, ಇದನ್ನು ಮತ್ತಷ್ಟು ಶ್ರೀಮಂತಗೊಳಿಸಬೇಕು : ಜಿಟಿಡಿ

ಈ ಸುದ್ದಿಯನ್ನು ಶೇರ್ ಮಾಡಿ

Mysuru-GT-devegowda
ಮೈಸೂರು, ಆ.15-ಭಾರತ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತಿದೆ. ಇದನ್ನು ಮತ್ತಷ್ಟು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಶ್ರೀಮಂತಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಕರೆ ನೀಡಿದರು. ನಗರದ ಬನ್ನಿಮಂಟಪದಲ್ಲಿನ ಪಂಜಿನ ಕವಾಯತು ಮೈದಾನದಲ್ಲಿ 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಎಲ್ಲಾ ರಂಗಗಳಲ್ಲಿಯೂ ದೇಶ ಸ್ವಾವಲಂಬಿಯಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕಿದೆ. ದೇಶದಲ್ಲಿರುವ ಅಗಾಧ ಯುವಶಕ್ತಿಯನ್ನು ಬಳಸಿಕೊಂಡು ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕಾ ಕ್ಷೇತ್ರಗಳಲ್ಲೂ ಪರಿಣಾಮಕಾರಿಯಾಗಿ ಸಾಧನೆ ಮಾಡುವ ಕೌಶಲ್ಯ ಭಾರತವಾಗಬೇಕು ಎಂದು ತಿಳಿಸಿದರು.

ಬಾಹ್ಯ ಶತೃಗಳಿಂದ ಹಗಲು, ರಾತ್ರಿ ಎನ್ನದೇ ನಮ್ಮ ದೇಶವನ್ನು ರಕ್ಷಿಸುತ್ತಿರುವ ಸೈನಿಕರನ್ನು ಹಾಗೂ ಅನ್ನ ನೀಡುವ ರೈತ ಸಮಾಜವನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕೆಂದು ಹೇಳಿದರು. ರಾಜ್ಯವನ್ನು ಹಸಿರೀಕರಣಗೊಳಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿನಿಂದ 18ರವರೆಗೆ ಗಿಡ ನೆಡುವ ಹಸಿರೀಕರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ದೇಶದಲ್ಲೇ ರಾಜ್ಯ ಹಸಿರೀಕರಿಕರಣದಲ್ಲೇ ಪ್ರಥಮ ಸ್ಥಾನ ಪಡೆಯಬೇಕೆಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಶಾಸಕರಾದ ತನ್ವೀರ್‍ಸೇಠ್, ನಾಗೇಂದ್ರ, ಮೇಯರ್ ಭಾಗ್ಯವತಿ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮತ್ತಿತರಿದ್ದರು.

Facebook Comments

Sri Raghav

Admin