ದೇಶದಲ್ಲಿ ಮತ್ತೆ 41 ಸಾವಿರ ಮಂದಿಗೆ ಕೊರೋನಾ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.22-ದೇಶದಲ್ಲಿ ಮತ್ತೆ 41383 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3.12 ಕೋಟಿ ಗಡಿ ದಾಟಿದೆ. ನಿನ್ನೆಯಿಂದ ಸೋಂಕಿಗೆ 507 ಮಂದಿ ಬಲಿಯಾಗಿರುವುದರಿಂದ ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,18,987 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.35ಕ್ಕೆ ಏರಿಕೆಯಾಗಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 4,09,394ಕ್ಕೆ ಸೀಮಿತಗೊಂಡಿದೆ.  ದಿನದ ಕೊರೊನಾ ಪಾಸಿಟಿವಿಟಿ ದರ ಶೇ.2.41ಇದ್ದರೆ, ವಾರದ ಪಾಸಿಟಿವಿಟಿ ರೇಟ್ ಶೇ.2.12ರಷ್ಟಿದೆ. 3,12 ಕೋಟಿ ಸೋಂಕಿತರ ಪೈಕಿ ಈಗಾಗಲೇ 3.04 ಕೋಟಿಯಷ್ಟು ಮಂದಿ ಗುಣಮುಖರಾಗಿದ್ದಾರೆ.

Facebook Comments