ಜೂ.13ರೊಳಗೆ ಸ್ವದೇಶಕ್ಕೆ ವಾಪಸ್ಸಾಗಲಿದ್ದಾರೆ 1 ಲಕ್ಷ ಭಾರತೀಯರು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 29- ವಿವಿಧ ದೇಶಗಳಲ್ಲಿ ಕೊರೊನಾ ಹಾವಳಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ ಸುಮಾರು 50,000 ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಜೂನ್ 13ರ ಒಳಗೆ ಒಂದು ಲಕ್ಷ ಜನರು ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳಲಾಗುತ್ತದೆ.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಈವರೆಗೆ ಸುಮಾರು ಅರ್ಧ ಲಕ್ಷದಷ್ಟು ಭಾರತೀಯರನ್ನು ಸ್ವದೇಶಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ಮಧ್ಯಾಹ್ನದವರೆಗೆ ಒಟ್ಟು 45,216 ಜನರನ್ನು ಭಾರತಕ್ಕೆ ವಾಪಸ್ ಕರೆತರಲಾಗಿದೆ. ಇವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಹಾಗೂ 5,107 ವೃತ್ತಿಪರರು ಸೇರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ತಿಳಿಸಿದ್ದಾರೆ.

ಜೂನ್ 13ರ ಒಳಗೆ ಒಂದು ಲಕ್ಷಕ್ಕೂ ಅಕ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗುವುದು. ಪಾಕಿಸ್ತಾನದಲ್ಲಿ ಸಿಲುಕಿರುವ 300ಕ್ಕೂ ಹೆಚ್ಚು ಭಾರತೀಯರು ನಾಳೆ ತಾಯ್ನಾಡಿಗೆ ಹಿಂದಿರುಗಲಿದ್ದಾರೆ.

ಬಾಂಗ್ಲಾದೇಶ ಮತ್ತು ನೇಪಾಳಗಳಲ್ಲಿ ನೆಲೆಸಿದ್ದ ಭಾರತೀಯರೂ ಸಹ ಭೂ ಮಾರ್ಗದ ಮೂಲ ದೇಶಕ್ಕೆ ಹಿಂದಿರುಗಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ಲ್ಯಾಟಿನ್ ಅಮೆರಿಕ, ಕೆರಿಬಿಯನ್, ಆಫ್ರಿಕಾ ಮತ್ತು ಯರೋಪ್‍ನ ಕೆಲವು ಭಾಗಗಳಲ್ಲಿ ಇರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

Facebook Comments

Sri Raghav

Admin