ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಈ ಸುದ್ದಿಯನ್ನು ಶೇರ್ ಮಾಡಿ

Kohli--11

ಗುವಾಹಟಿ.ಅ.21: ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ಶತಕದ ನೆರವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತಕ್ಕೆ 322 ರನ್’ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಭಾರತ ನಾಯಕ ವಿರಾಟ್ ಕೊಹ್ಲಿ (140) ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ (152) ಅವರ ಭರ್ಜರಿ ಶತಕದ ನೆರವಿನಿಂದ ಕೇವಲ 42.1 ಓವರ್’ಗಳಲ್ಲಿ ಗುರಿ ಮುಟ್ಟುವ ಮೂಲಕ ಜಯ ಸಾಧಿಸಿತು.

140 ರನ್ ಬಾರಿಸಿದ ನಾಯಕ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿ ಜೀವನದ 36ನೇ ಶತಕ ದಾಖಲಿಸಿದರೆ, 152 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಬ್ಬರು 2ನೇ ವಿಕೇಟ್ ಜೊತೆಯಾಟದಲ್ಲಿ 246 ರನ್ ಪೇರಿಸಿದರು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ ತಂಡ ಶಿಮ್ರೋನ್ ಹೆಟ್ಮಾಯಾರ್ ಅವರ ಶತಕ[106] , ಜೇಸನ್ ಹೋಲ್ಡ ರ್ [51] ಅವರ ಆಕರ್ಷಕ ಅರ್ಧ ಶತಕದಿಂದ 322 ರನ್ ಗುರಿ ನೀಡಿತ್ತು.

ಸಂಕ್ಷಿಪ್ತ ಸ್ಕೋರ್ :
ವೆಸ್ಟ್ ಇಂಡೀಸ್ : 322
ಭಾರತ : 326

Facebook Comments