ಭಾರತದ ಸಾಲದ ಅನುಪಾತ ಶೇ.90ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್, ಏ.8-ಕೊರೊನಾ ಸೋಂಕು ಉಲ್ಬಣಗೊಂಡಿರುವ ಸಂದರ್ಭದಲ್ಲಿ ಭಾರತದ ಜಿಡಿಪಿ ಸಾಲದ ಅನುಪಾತ ಶೇ.74 ರಿಂದ ಶೇ.90ಕ್ಕೆ ಏರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಹೇಳಿದೆ. ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನಲೆಯಲ್ಲಿ ಶೀಘ್ರದಲ್ಲೇ ಸಾಲದ ಅನುಪಾತ ಶೇ.80ಕ್ಕೆ ಇಳಿಯುವ ಸಾಧ್ಯತೆಗಳಿವೆ ಎಂದು ಐಎಂಎಫ್ ಉಪ ನಿರ್ದೇಶಕ ಪಾಲೋ ಮಾರೋ ಅಭಿಪ್ರಾಯಪಟ್ಟಿದ್ದಾರೆ.

2019ರಲ್ಲಿ ಭಾರತದ ಜಿಡಿಪಿ ಶೇ.74ಕ್ಕೆ ಸಿಮೀತಗೊಂಡಿತ್ತು. ಆದರೆ, ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಶೇ.90ರಷ್ಟು ಏರಿಕೆಯಾಗಿದೆ. ಶೀಘ್ರದಲ್ಲೇ ಈ ಅಂತರ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.

Facebook Comments