ಭಾರತದ ಚುನಾವಣೆ ವಿಶ್ವಕ್ಕೆ ಪ್ರೇರಣೆ : ಅಮೆರಿಕ

ಈ ಸುದ್ದಿಯನ್ನು ಶೇರ್ ಮಾಡಿ

ವಾಂಗ್ಟನ್, ಮೇ 24-ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಭಿನಂದನೆ ಸಲ್ಲಿಸಿದೆ. ವಿಶ್ವದ ಇತಿಹಾಸದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದ ಚುನಾವಣಾ ಪ್ರಕ್ರಿಯೆಯು ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ ಎಂದು ಪ್ರಪಂಚದ ಅತ್ಯಂತ ಶಕ್ತಿಶಾಲಿ ರಾಷ್ಟ್ರ ಬಣ್ಣಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್, ಭಾರತೀಯ ಜನತಾ ಪಕ್ಷವನ್ನು ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೆ ತಂದು ಮತ್ತೊಮ್ಮೆ ಪ್ರಧಾನಮಂತ್ರಿಯಾಗುತ್ತಿರುವ ಅಮೆರಿಕದ ಆಪ್ತ ಗೆಳೆಯ ನರೇಂದ್ರ ಮೋದಿ ಅವರಿಗೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಮಾನವನ ಇತಿಹಾಸದಲ್ಲೇ ಬೃಹತ್ ಜನತಂತ್ರ ಪ್ರಕ್ರಿಯೆ ಎಣಿಸಿರುವ ಭಾರತದ ಲೋಕಸಭಾ ಚುನಾವಣೆ ಇಡೀ ವಿಶ್ವಕ್ಕೆ ಪ್ರೇರಣೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ