BIG NEWS: ಇಂದಿರಾ ಕ್ಯಾಂಟೀನ್‌ಗಳಲ್ಲಿ ಇಂದಿನಿಂದ ಮೇ 24ರ ವರೆಗೂ ಉಚಿತ ಆಹಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ11- ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸೆಮಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕೂಲಿಕಾರರು, ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಡವರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಇಂದಿನಿಂದ ಮೇ 24ರ ವರೆಗೂ ಉಚಿತ ಆಹಾರ ನೀಡಲಾಗುತ್ತದೆ.
ಕೋವಿಡ್ ಎರಡನೆ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಚಿತ ಆಹಾರ ನೀಡಲಾಗುತ್ತದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜು ತಿಳಿಸಿದ್ದಾರೆ‌.

ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸೇರಿದ‌ಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತದೆ. ಈ ಸಂಬಂಧ ಪೌರಾಡಳಿತ ಇಲಾಖೆ ಆದೇಶ ಹೊರಡಿಸಿದೆ. ಉಪಾಹಾರಕ್ಕೆ ಐದು ರೂ., ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಹತ್ತು ರೂ. ನೀಡಬೇಕಾಗಿತ್ತು. ದುರ್ಬಲ ವರ್ಗದವರು, ಬಡ ವ್ಯಾಪಾರಿಗಳು, ಕಾರ್ಮಿಕರು ಸಂಕಷ್ಟದಲ್ಲಿರುವುದರಿಂದ ಪೌರಾಡಳಿತ ಇಲಾಖೆ ಆಹಾರದ ವೆಚ್ಚ ಭರಿದಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಸೌಲಭ್ಯದ ಸದ್ಬಳಕ್ಕೆ ಮಾಡಿಕೊಂಡು ಕೋವಿಡ್ ಮಾರ್ಗಸೂಚಿ ಪಾಲಿಸಿ, ಕೋವಿಡ್ ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Facebook Comments