ಇಂದಿರಾ ಕ್ಯಾಂಟೀನ್‍ಗಳ ಉಸ್ತುವಾರಿ ಬಿಬಿಎಂಪಿ ಹೆಗಲಿಗೆ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.24- ನಗರದಲ್ಲಿರುವ ಇಂದಿರಾ ಕ್ಯಾಂಟೀನ್‍ಗಳ ಉಸ್ತುವಾರಿ ಬಿಬಿಎಂಪಿ ಹೆಗಲೇರುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬಡವರ ಹಸಿವು ನೀಗಿಸುವ ಉದ್ದೇಶದಿಂದ 198 ವಾರ್ಡ್‍ಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಿದರು.

ಐದು ರೂ.ಗೆ ಉಪ ಹಾರ, 10ರೂ.ಗೆ ಊಟ ಕೊಡಾಗುತ್ತದೆ. ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಕಾಂಗ್ರೆಸ್ ಸರ್ಕಾರ ಹೋಯಿತು. ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಸಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‍ಗಳಿಗೆ ಕೊಡಲಾಗುತ್ತಿದ್ದ ಅನುದಾನ ನಿಲ್ಲಿಸಲಾಗಿದೆ ಹಾಗಾಗಿ ಬಿಬಿಎಂಪಿ ಸಂಪೂರ್ಣ ಖರ್ಚು ವೆಚ್ಚ ನೋಡಿಕೊಳ್ಳುತ್ತಿದೆ.

ಹಾಗಾಗಿ ಸರ್ಕಾರಕ್ಕೆ ಪತ್ರ ಬರೆದು ಶೇ.50ರಷ್ಟು ಅನುದಾನ ಕೊಡುವಂತೆ ಮನವಿ ಮಾಡಿದ್ದೇವೆ. ಆದರೆ, ಆರ್ಥಿಕ ಇಲಾಖೆ ಶೇ.25ರಷ್ಟು ಅನುದಾನ ಕೊಡಲು ಸಾಧ್ಯ ಎಂದಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶೇ.50ರಷ್ಟು ಅನುದಾನಕ್ಕೆ ಮನವಿ ಮಾಡುತ್ತೇವೆ.

ಇಲ್ಲದಿದ್ದರೆ ಇಂದಿರಾ ಕ್ಯಾಂಟೀನ್‍ಗಳ ಸಂಪೂರ್ಣ ಉಸ್ತುವಾರಿ ಬಿಬಿಎಂಪಿ ಹೆಗಲಿಗೆ ಬೀಳಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದರು.

Facebook Comments