ಇಂಡ್ಯೋನೆಷ್ಯಾದಲ್ಲಿ ಭೀಕರ ಪ್ರವಾಹಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಜಕಾರ್ಟ, ಮಾ.17- ಧಾರಾಕಾರ ಮಳೆಯಿಂದ ಉಂಟಾದ ಭೀಕರ ಪ್ರವಾಹದಿಂದ 50ಮಂದಿ ಸಾವನ್ನಪ್ಪಿ, 21ಮಂದಿ ಗಾಯಗೊಂಡಿರುವ ದುರಂತ ಇಂಡೋನೆಷ್ಯಾದ ಪೂರ್ವ ಪ್ರಾಂತದ ಪಪುವಾದ ಸೆಂಟಾನಿ ಪ್ರದೇಶದಲ್ಲಿ ಸಂಭವಿಸಿದೆ.

ಭೀಕರ ನೈಸರ್ಗಿಕ ವಿಕೋಪದಲ್ಲಿ ಕೆಲವರು ನಾಪತ್ತೆಯಾಗಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಸಮರೋಪಾದಿಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆ ಮುಂದುವರೆದಿದೆ.

ಪ್ರವಾಹ ಸಾವು-ನೋವಿನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಲವಾರು ಮನೆಗಳು ಪ್ರವಾಹಕ್ಕೆ ಹಾನಿಗೀಡಾಗಿವೆ.ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ರಾಷ್ಟ್ರೀಯ ದುರಂತದ ಸಂಸ್ಥೆಯ ವಕ್ತಾರು ಸುಟೋಪೊ ಪುವೋ ನುಗ್ರೋಹೋ ತಿಳಿಸಿದ್ದಾರೆ.

ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದ್ದು, ಪ್ರವಾಹ ಕ್ಷೀಣಿಸಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಾರ್ಯ ಮುಂದುವರೆದಿದೆ.
ಭಾರೀ ಮಳೆ ಮತ್ತು ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.

Facebook Comments