ಚಿತ್ರರಂಗದ ಕಾರ್ಮಿಕರಗೆ ಇನ್ಪೋಸಿಸ್‌ ಫೌಂಡೇಶನ್‌ ನಿಂದ ಆಹಾರ ಸಾಮಗ್ರಿ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕೊರೋನಾ ಮಹಾಮಾರಿಯಿಂದಾಗಿ ಸಮಸ್ಯೆಗೆ ಸಿಲುಕಿರುವ ಚಿತ್ರರಂಗದ ಸಾವಿರಾರು ಕಾರ್ಮಿಕರ ನೆರವಿಗೆ ಇನ್ಫೋಸಿಸ್‌ ಫೌಂಡೇಶನ್‌ ಮುಂದಾಗಿದೆ. ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಇನ್ಫೋಸಿಸ್‌ ಫೌಂಡೇಶನ್‌ ವಿತರಿಸಲಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್‌ ಆಫೀಸ್‌ ಬಳಿಯಲ್ಲಿ ಚಾಲನೆ ನೀಡಲಾಯಿತು.

ನಿರ್ಮಾಪಕ ರಮೇಶ್‌ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ.ರಾ. ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್‌ ಸೇರಿದಂತೆ ಹಲವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಇನ್ಪೋಸಿಸ್‌ ಫೌಂಡೇಷನ್‌ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಣೆಯ ಕಾರ್ಯವನ್ನು ಮುಂದುವರೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಾಳೀಪಟ – 2 ಸಿನೆಮಾದ ನಿರ್ಮಾಪಕರಾದ ರಮೇಶ್‌ ರೆಡ್ಡಿ, ಇನ್ಪೋಸಿಸ್‌ ಫೌಂಡೇಷನ್‌ ವತಿಯಿಂದ ದೇಶ ಹಾಗೂ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿಯನ್ನು ತೋರಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ ಎಂದು ಹೇಳಿದರು.

ಸಾ.ರಾ.ಗೋವಿಂದು ಮಾತನಾಡಿ, 18 ಚಲನ ಚಿತ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕರೋನಾ ಕರ್ಪ್ಯೂದಿಂದಾಗಿ ಎಲ್ಲರ ಜೀವನ ತೊಂದರೆಗೆ ಸಿಲುಕಿದೆ. ಅವರ ಜೀವನಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಲು ಇನ್ಪೋಸಿಸ್‌ ಫೌಂಡೇಷನ್‌ ಮುಂದಾಗಿರುವುದು ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.

Facebook Comments

Sri Raghav

Admin