ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.1- ಲಾಡ್ಸ್ಸ್ ಎಕ್ಸ್ಸ್‍ಚೇಂಜ್ ಆ್ಯಪ್ ಮೂಲಕ ಬೆಟ್ಟಿಂಗ್ ರೇಶ್ಯೂ ನೋಡಿಕೊಂಡು ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಸಿ 15 ಲಕ್ಷ ಹಣ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಇಂದಿರಾನಗರ ನಿವಾಸಿ ನವೀನ್(31) ಬಂತ ಆರೋಪಿ.

ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಡಬಲ್ ರಸ್ತೆ, ನಂ.56, ಗೇಟ್‍ವೇ ಏರ್ ಕ್ಲಿನಿಕ್ ಎಂಬ ಸೆಲೂನ್ ಬಳಿಯಲ್ಲಿ ಕೆಲವರು ಸನ್‍ರೈಸ್ ಹೈದರಾಬಾದ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಪಂದ್ಯಗಳಿಗೆ ಸಂಬಂಸಿದಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು.

ಅಲ್ಲದೆ ಆರ್‍ಸಿಬಿ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ಪಂದ್ಯಗಳಲ್ಲಿಯೂ ಇವರು ಬೆಟ್ಟಿಂಗ್ ನಡೆಸಿದ್ದು, ಈ ಬಗ್ಗೆ ಬೆಟ್ಟಿಂಗ್ ಹಣ ಕಟ್ಟಿದ್ದ ಪಂಟರುಗಳಿಂದ, ಸೋಲು ಮತ್ತು ಗೆಲುವಿನ ಹಣ ಪಡೆಯುವುದು ಮತ್ತು ಹಣವನ್ನು ನೀಡುವುದನ್ನು ಮಾಡಿಕೊಂಡಿರುತ್ತಾರೆ.

ಲಾಡ್ಸ್ ಎಕ್ಸ್‍ಚೇಂಜ್ ಎಂಬ ಆ್ಯಪ್ ಮತ್ತು ವೆಬ್‍ಸೈಟ್‍ಗಳ ಮೂಲಕ ಬೆಟ್ಟಿಂಗ್ ರೇಶ್ಯೂವನ್ನು ನೋಡಿಕೊಂಡು, ಮೊಬೈಲ್, ವ್ಯಾಟ್ಸ್ ಆ್ಯಪ್ ಮೂಲಕ ಸಂಪರ್ಕಿಸಿ ಗಿರಾಕಿಗಳು ಸೂಚಿಸಿದಂತೆ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿರುವುದಾಗಿ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಬಂದಿದೆ.

ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿ 15 ಲಕ್ಷ ರೂ. ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿ, ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್. ಹನುಮಂತರಾಯ ನೇತೃತ್ವದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಜಿ. ಶಿವಪ್ರಸಾದ್ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ಕೈಗೊಂಡಿದ್ದರು.

Facebook Comments