ಇರಾನ್‍ನಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತ ಸೇರಿ 5 ರಾಷ್ಟ್ರಗಳಿಗೆ ಅಮೆರಿಕ ಬೆದರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್,ಏ.22- ತನ್ನ ಕಡುವೈರಿ ರಾಷ್ಟ್ರ ಇರಾನ್‍ನಿಂದ ತೈಲ(ಇಂಧನ) ಆಮದು ಮಾಡಿಕೊಳ್ಳುತ್ತಿರುವ ಭಾರತ ಸೇರಿದಂತೆ ಐದು ರಾಷ್ಟ್ರಗಳಿಗೆ ಅಮೆರಿಕ ಮತ್ತೊಮ್ಮೆ ಗಂಭೀರ ಎಚ್ಚರಿಕೆ ನೀಡಿದೆ.

ಭಾರತ, ಚೀನಾ, ಟರ್ಕಿ, ಜಪಾನ್ ಹಾಗೂ ದಕ್ಷಿಣ ಕೊರಿಯ ರಾಷ್ಟ್ರಗಳ ವಿರುದ್ಧ ಆರ್ಥಿಕ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಏಷ್ಯಾ ಖಂಡದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಅಲ್ಲದೆ ತನ್ನ ವಿರುದ್ಧ ಹಗೆತನ ಹೊಂದಿರುವ ಈ ರಾಷ್ಟ್ರದೊಂದಿಗೆ ಐದು ದೇಶಗಳು ತೈಲ ವಹಿವಾಟು ಸಂಬಂಧವನ್ನು ಮುಂದುವರೆಸಿವೆ.

ಈ ಬಗ್ಗೆ ಈ ಹಿಂದೆ ಎಚ್ಚರಿಕೆ ನೀಡಿದ್ದೆ. ಆದರೆ ಏನೂ ಪ್ರಯೋಜನವಾಗಿಲ್ಲ. ಹಾಗಾಗಿ ಈಗ ಈ ದೇಶಗಳಿಗೆ ಆರ್ಥಿಕ ದಿಗ್ಬಂಧನ ವಿಧಿಸದೆ ಅನ್ಯ ಮಾರ್ಗವಿಲ್ಲ ಎಂದು ಟ್ರಂಪ್ ಗುಡುಗಿದ್ದಾರೆ.

ವಿದೇಶಾಂಗ ಸಚಿವ ಮೈಕ್ ಪಂಪಿಯೋ ಸಹ ಅಮೆರಿಕ ಅಧ್ಯಕ್ಷರ ಎಚ್ಚರಿಕೆಯನ್ನು ಶ್ವೇತಭವನದಲ್ಲಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದು, ಆರ್ಥಿಕ ದಿಗ್ಬಂಧನ ಹೇರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ