ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ: ಈರಣ್ಣ ಕಡಾಡಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಸೆ.10-ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಲ್ಲದೆ, ಪ್ರಗತಿಪರ ರೈತರೊಂದಿಗೆ ಸಂವಾದ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂಬುದಾಗಿ ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ನೀಡಿರುವ ಹಲವಾರು ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸಬೇಕಾಗಿರುವುದರಿಂದ ರೈತ ಮೋರ್ಚಾ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರಲ್ಲದೆ.

ಅದಕ್ಕಾಗಿ ರಾಜ್ಯಾದ್ಯಂತ ಹತ್ತು ಸಂಘಟನಾತ್ಮಕ ವಿಭಾಗಗಳನ್ನಾಗಿ ರಚಿಸಿ ಈಗಾಗಲೆ ಮೂರು ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿ ಈಗ ಚಿತ್ರದುರ್ಗ ಜಿಲ್ಲೆಗೆ ಬಂದಿದ್ದೇನೆ. ಉಳಿದ ಆರು ವಿಭಾಗದ ಜಿಲ್ಲೆಗಳನ್ನು ಪ್ರವಾಸ ಮಾಡಿ ರೈತರು ನಿತ್ಯದ ಬದುಕಿನಲ್ಲಿ ಅನಭವಿಸುತ್ತಿರುವ ಸಂಕಟಗಳನ್ನು ತಿಳಿದುಕೊಂಡು ಕೇಂದ್ರ ಸರ್ಕಾರದ ಮುಂದಿಡುತ್ತೇನೆ ಎಂಬುದಾಗಿ ಅವರು ಹೇಳಿದರು.

ಫಸಲ್ ಭೀಮಾ ಯೋಜನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಗೆ 118 ಕೋಟಿ 55 ಲಕ್ಷ ರೂ. ಬಂದಿದ್ದು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಲಿದೆ. ದೇಶದಲ್ಲಿ ಹತ್ತು ಸಾವಿರ ಎಫ್.ಪಿ.ಓ.ಗಳನ್ನು ರಚಿಸಲಾಗುವುದು. ರೈತರು ತಮ್ಮ ಹೊಲದಲ್ಲಿನ ಬೆಳೆಗಳನ್ನು ಮೊಬೈಲ್ ಆಪ್ ಮೂಲಕ ಸರ್ವೆ ನಡೆಸಿ ದಾಖಲಿಸಬಹುದಾದ ಅವಕಾಶವನ್ನು ನಮ್ಮ ಸರ್ಕಾರ ಕಲ್ಪಿಸಿದೆ ಎಂದರು.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಓ.ಬಿ.ಸಿ.ರಾಜ್ಯ ಉಪಾಧ್ಯಕ್ಷ ಸಿದ್ದೇಶ್ಯಾದವ್, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಇತರರು ಉಪಸ್ಥಿತರಿದ್ದರು.

Facebook Comments