ಜಿಎಸ್‍ಟಿ ತೆರಿಗೆ ಪಾಲು ನಮ್ಮ ಹಕ್ಕು, ಕೇಂದ್ರ ನೀಡುವ ಭಿಕ್ಷೆ ಅಲ್ಲ : ಖಂಡ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.2- ರಾಜ್ಯದ ಜಿಎಸ್‍ಟಿ ತೆರಿಗೆ ಪಾಲು ನಮ್ಮ ರಾಜ್ಯ ಸರ್ಕಾರದ ಹಕ್ಕು. ಕೇಂದ್ರ ಸರ್ಕಾರ ಕೊಡುವ ಭಿಕ್ಷೆ ಅಲ್ಲ. ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಅಂತಿದೆ ನರೇಂದ್ರ ಮೋದಿ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಈಗ ಎಲ್ಲಿದ್ದೀರಿ ? ಅಂಜುಬುರುಕುತನ ಬಿಟ್ಟು ಕನಿಷ್ಠ ಪ್ರಧಾನಿ ಬಳಿ ಮಾತನಾಡಿ, ನಮ್ಮ ಪಾಲಿನ ತೆರಿಗೆ ಹಣ ಕೊಡಿಸಿ, ನ್ಯಾಯ ಒದಗಿಸುವಿರಾ ಉತ್ತರಿಸಿ ಎಂದು ಅವರು ಹೇಳಿದ್ದಾರೆ.

ರಾಜ್ಯದ ಜಿಎಸ್‍ಟಿ ತೆರಿಗೆ ಪಾಲಿನ ಹಣವನ್ನು ಕೇಂದ್ರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ತೆರಿಗೆ ಪಾಲಿನ ಹಣ ನೀಡಲು ಸಾಧ್ಯವಾಗುತ್ತಿಲ್ಲ.

ಬೇಕಾದರೆ ರಿಸರ್ವ್ ಬ್ಯಾಂಕ್‍ನಿಂದ ಸಾಲ ಪಡೆಯಿರಿ ಎಂದು ಕೇಂದ್ರ ಸರ್ಕಾರ ಹೇಳಿರುವ ಮಾತಿಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ನಮ್ಮ ಪಾಲಿನ ಹಣ ಕೇಳಿದರೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿರುವ ಧೋರಣೆಗೆ ಹಲವು ಪ್ರತಿಪಕ್ಷದ ನಾಯಕರು ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ.

Facebook Comments