Friday, March 29, 2024
Homeರಾಜ್ಯಹುಬ್ಬಳ್ಳಿ - ಧಾರವಾಡದಲ್ಲಿ ಉಗ್ರರ ಕ್ಯಾಂಪ್..!

ಹುಬ್ಬಳ್ಳಿ – ಧಾರವಾಡದಲ್ಲಿ ಉಗ್ರರ ಕ್ಯಾಂಪ್..!

ಹುಬ್ಬಳ್ಳಿ,ಅ.3- ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚ ರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮಘಟ್ಟದಲ್ಲಿ ಉಗ್ರರ ಕ್ಯಾಂಪ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.

ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ಜಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‍ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ನಿನ್ನೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿ ಧಾಲಿವಾಲ್ ಹೇಳಿದ್ದಾರೆ.

ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‍ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‍ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣತರಾಗಿದ್ದರು ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಮಾಹಿತಿ ನೀಡಿದೆ.ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‍ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ.

ಪುಣೆ ಐಸಿಸ್ ಕೇಸಿನಲ್ಲಿ ಬೇಕಾಗಿದ್ದ ಶಹನವಾಜ್:
ವೃತ್ತಿಯಲ್ಲಿ ಮೈನಿಂಗ್ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ ಪ್ರಕಾರ, ಶಹನವಾಜ್ ಮೂಲತಃ ದೆಹಲಿಯವನಾದರೂ ಪುಣೆಗೆ ತೆರಳಿದ್ದ. ಜುಲೈನಲ್ಲಿ ಪುಣೆಯಲ್ಲಿ ನಡೆದ ದಾಳಿಯ ವೇಳೆ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ಶಹನವಾಜ್ ಪರಾರಿಯಾಗಿ, ದೆಹಲಿಗೆ ಮರಳಿದ್ದ. ಅಂದಿನಿಂದ ಅಡಗುದಾಣದಲ್ಲಿ ಆತ ವಾಸಿಸುತ್ತಿದ್ದ. ಈತ ತನ್ನ ಹೆಂಡತಿ ಬಸಂತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ ಎಂದು ಮೂಲಗಳು ಹೇಳಿವೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಈ ತಿಂಗಳ ಆರಂಭದಲ್ಲಿ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕ ಶಂಕಿತರಾದ ರಿಜ್ಜಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲಾ ಮತ್ತು ತಲ್ಹಾ ಲಿಯಾಕತ್ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು . ಈ ಪೈಕಿ ಡಯಪರ್ವಾಲಾ ಹಾಗೂ ತಲ್ಹಾ ಇನ್ನೂ ಸಿಕ್ಕಿಲ್ಲ. ಅವರಿಗಾಗಿ ಬಲೆ ಬೀಸಲಾಗಿದೆ.

ಶಹನವಾಜ್, ಅಬ್ದುಲ್ಲಾ ಮತ್ತು ರಿಜ್ಜಾನ್ ಅವರು ಐಸಿಸ್ ಸಂಬಂಧಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಬ್ರೇನ್‍ವಾಶ್ ಆಗಿ ಭಯೋತ್ಪಾದಕರಾಗಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿರುವ ಐಸಿಸ್ ಮಾಡ್ಯೂಲ್‍ನೊಂದಿಗೆ ಇವರಿಬ್ಬರೂ ನಂಟು ಹೊಂದಿದ್ದರು. ಅವರು ದೇಶಾದ್ಯಂತ ಹಿಂಸಾಚಾರ ಮತ್ತು ಭಯೋತ್ಪಾದನೆಯನ್ನು ಪ್ರಚುರಪಡಿಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಅಬ್ದುಲ್ಲಾ ಡಯಾಪರ್ವಾಲಾ ಪುಣೆಯಲ್ಲಿ ಡಯಾಪರ್ ಅಂಗಡಿಯನ್ನು ನಡೆಸುತ್ತಿದ್ದ. ಅದನ್ನು ಸ್ಪೋಟಕ ಸಾಧನಗಳನ್ನು ಜೋಡಿಸಲು ಬಳಸಲಾಗುತ್ತಿತ್ತು. ಬಂಧಿತರಿಂದ ಪ್ಲಾಸ್ಟಿಕ್ ಟ್ಯೂಬ್, ಕಬ್ಬಿಣದ ಪೈಪ್, ವಿವಿಧ ರೀತಿಯ ರಾಸಾಯನಿಕ, ಟೈಮಿಂಗ್ ಉಪಕರಣ ಮೊದಲಾದ ವಸ್ತುಗಳನ್ನು ವಶಪಡಿ ಸಿಕೊಳ್ಳಲಾಗಿದೆ. ಇವೆಲ್ಲವೂ ಸುಧಾರಿತ ಸೋಟಕ ತಯಾರಿಸಲು ಬಳಸುವ ವಸ್ತುಗಳಾಗಿರುವ ಕಾರಣ, ಇವರೆಲ್ಲಾ ದೊಡ್ಡ ದುಷ್ಕೃತ್ಯ ನಡೆಸಲು ಸಜ್ಜಾಗಿದ್ದರು ಎಂಬುದು ಖಚಿತಪಟ್ಟಿದೆ.

RELATED ARTICLES

Latest News