ಎಸ್‌ಎಸ್‌ಎಲ್‌ಸಿ, ಐಟಿಐ ಮುಗಿಸಿದವರಿಗೆ ಇಸ್ರೋದಲ್ಲಿ ಉದ್ಯೋಗಾವಕಾಶ..!

ಈ ಸುದ್ದಿಯನ್ನು ಶೇರ್ ಮಾಡಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ಖಾಲಿ ಇರುವ 86 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 24/08/2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 13/09/2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ತಂತ್ರಜ್ಞ ಬಿ, ಡ್ರಾಫ್ಟ್ಸ್‌ಮನ್ ಬಿ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ 10 ನೇ ತರಗತಿ, ಐಟಿಐ ಅಥವಾ ಸಮನಾಗಿರುವ ವಿದ್ಯಾರ್ಹತೆ ಹೊಂದಿರಬೇಕು.

18 ರಿಂದ 35 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕವಿಲ್ಲ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಇನ್ನು ಆಯ್ಕೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧರಿಸಿರುತ್ತದೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಪರಶೀಲಿಸಿ : https://apps.isac.gov.in/TAHSFC-2019/advt.jsp

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ