BIG BREAKING: ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಡಿಸೆಂಬರ್ ೬-ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಇಂದು ಸಿಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡು ಅಕ್ರಮ ಹಣ ಸಂಗ್ರಹಣೆ ಬಗ್ಗೆ ಪತ್ತೆ ಹಚ್ಚಿದ್ದಾರೆ ಇತ್ತೀಚೆಗೆ ವಿಧಾನಸಭೆಯ ಲೆಕ್ಕಪತ್ರ ಸ್ಥಾಯಿ ಸಮಿತಿಯು ಇಲ್ಲಿ ನಡೆಯುತ್ತಿರುವ ಹಣ ವರ್ಗಾವಣೆ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬಾಡಿಗೆ ಹಣದಲ್ಲಿ ಲಾಸ್ಲೊ ವಾಗಿದ್ದು ಅದರ ಬಗ್ಗೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವರದಿ ಸಲ್ಲಿಸಿತ್ತು.

ಇಂದು ಸಂಜೆ ಚಳಿಗಾಲದ ರೇಸ್  ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಸುಮಾರು ಮೂವತ್ತಕ್ಕೂ ಹೆಚ್ಚು ಅಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದು ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ ಇದರಿಂದಾಗಿ ಅಲ್ಲಿಗೆ ಬಂದಿದ್ದ ರೇಸ್ ವೀಕ್ಷಕರು ಹಾಗೂ ಬಾಜಿ ಕಟ್ಟಿದವರು ಕೂಡ ಕೆಲ ಕಾಲ ಆತಂಕ ಕೊಟ್ಟು ಆಚೆ ಓಡಿದ್ದಾರೆ

Facebook Comments