ಕಾಂಗ್ರೆಸ್ ಮುಖಂಡ ರಾಮೋಜಿಗೌಡ ಮನೆ ಮೇಲೆ ಐಟಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.2- ಕಾಂಗ್ರೆಸ್ ಮುಖಂಡ ರಾಮೋಜಿಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 15 ಜನ ಐಟಿ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ಆಗಮಿಸಿ ಎಲ್ಲ ಸಿಬ್ಬಂದಿಗಳ ಮೊಬೈಲ್‍ಅನ್ನು ವಶಕ್ಕೆ ಪಡೆದು ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

ಈ ಹಿಂದೆ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಸಿದ್ದ ರಾಮೋಜಿಗೌಡ ಅವರ ಆನೇಕಲ್‍ನ ಹುಲಿವಂಗಲ ನಿವಾಸದಲ್ಲಿರುವ ಮನೆ ಹಾಗೂ ಎಚ್‍ಎಸ್‍ಆರ್ ಬಡಾವಣೆಯಲ್ಲಿರುವ ಬಿಎಸ್‍ಆರ್ ಡೆವಲಪರ್ಸ್ ಕಚೇರಿಗೆ ಬೆಳಗ್ಗೆ 6 ಗಂಟೆ ಸಮಯದಲ್ಲಿ ದಾಳಿ ನಡೆಸಿರುವ ಐಟಿ ಅಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕಚೇರಿಯಲ್ಲಿರುವ ಕಡತಗಳು ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಎಚ್‍ಎಸ್‍ಆರ್ ಬಡಾವಣೆಯಲ್ಲಿರುವ ರಾಮೋಜಿಗೌಡ ಒಡೆತನದ ನೆಕ್ಸ್‍ಪ್ಲೇಸ್ ಇನೋ ಪ್ರೈವೇಟ್ ಲಿಮಿಡೆಟ್ ಕಚೇರಿ ಮೇಲೂ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸಿರಿ ವೈಭವ್ ಜ್ಯುವೆಲರ್ಸ್ ಶಾಪ್ ಮೇಲೂ ದಾಳಿ: ರಾಜರಾಜೇಶ್ವರಿ ನಗರದಲ್ಲಿರುವ ಸಿರಿ ವೈಭವ್ ಜ್ಯುವೆಲರ್ಸ್ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

Facebook Comments