ಭಾಸ್ಕರ್ ದಿನಪತ್ರಿಕೆ ಕಚೇರಿಗಳ ಮೇಲೆ IT ಅಧಿಕಾರಿಗಳ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.22-ದೇಶದ ಹಲವು ನಗರಗಳಲ್ಲಿರುವ ದೈನಿಕ್ ಭಾಸ್ಕರ್ ದಿನಪತ್ರಿಕೆ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆ ಆಡಳಿತ ಮಂಡಳಿಯವರು ಭಾರಿ ಪ್ರಮಾಣದ ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಮಾಹಿತಿ ಮೇರೆಗೆ ಭೂಪಾಲ್,ಜೈಪುರ್, ಆಹಮದಾಬಾದ್ ಮತ್ತಿತರ ನಗರಗಳಲ್ಲಿರುವ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ತೆರಿಗೆ ವಂಚನೆಯ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ಆದರೆ, ದೇಶದ ಬೃಹತ್ ಮಾಧ್ಯಮ ಸಂಸ್ಥೆ ಮೇಲೆ ನಡೆದಿರುವ ದಾಳಿ ಬಗ್ಗೆ ಆದಾಯ ತೆರಿಗೆ ಇಲಾಖೆ ಯಾವುದೆ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಭೂಪಾಲ್‍ನಲ್ಲಿರುವ ದೈನಿಕ್ ಭಾಸ್ಕರ್ ಪತ್ರಿಕೆ ಕಚೇರಿ ಮೇಲೆ ಐಟಿ ದಾಳಿಯಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.

Facebook Comments