ಕೊರೋನಾ ಜೊತೆ ಹೋರಾಡಿ ಸಾವು ಗೆದ್ದ ಬಂದ ಕ್ಷಣ ನೆನೆದು ಕಣ್ಣೀರಿಟ್ಟ ಬ್ರಿಟನ್ ಪ್ರಧಾನಿ..!

ಈ ಸುದ್ದಿಯನ್ನು ಶೇರ್ ಮಾಡಿ

ಲಂಡನ್,ಮೇ 3- ಕಾಯಿಲೆಯನ್ನು ಎದುರಿಸಿದ ಸನ್ನಿವೇಶ ಕಠಿಣ ಕ್ಷಣಗಳಾಗಿದ್ದವು.. ತಮಗೆ ಬರಬಹುದಾದ ಸಾವಿನ ಸಂಗತಿಯನ್ನು ಘೋಷಿಸಲು ವೈದ್ಯರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಎಂದು ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ.

ಅಲ್ಲಿನ ಸ್ಥಳೀಯ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಅದು ಕಠಿಣ ಕ್ಷಣಗಳಾಗಿದ್ದವು. ಪರಿಸ್ಥಿತಿ ಕೈ ಮೀರಿ ಹೋದರೆ ಏನು ಮಾಡಬೇಕು ಎಂಬುದರ ಬಗ್ಗೆ ವೈದ್ಯರು ಒಂದಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರು.

ನಾನು ಉತ್ತಮ ಸ್ಥಿತಿಯಲ್ಲಿರಲಿಲ್ಲ. ಸಾವಿನ ಘೋಷಣೆ ಮಾಡಲು ದಿಢೀರ್ ವ್ಯವಸ್ಥೆಗಳು ನಡೆಯುತ್ತಿವೆ ಎಂಬುದು ನನಗೆ ಗೊತ್ತಿತ್ತು ಎಂದು ತೀವ್ರ ಘಟಕದಲ್ಲಿದ್ದ ಸಂದರ್ಭವನ್ನು ಮೆಲುಕು ಹಾಕಿದ್ದಾರೆ. ಈ ಕಾಯಿಲೆಯಿಂದ ಪಾರಾಗುವುದು ಹೇಗೆ ಎಂದು ಯೋಚಿಸುತ್ತಿದ್ದೆ ಹೊರತು ಸಾಯುತ್ತೇನೆ ಎಂಬ ಯೋಚನೆ ಮಾಡಲಿಲ್ಲ.

ನನ್ನನ್ನು ಐಸಿಯುಗೆ ಸ್ಥಳಾಂತರಿಸಿ, ಆಕ್ಸಿಜನ್ ವ್ಯವಸ್ಥೆಯಲ್ಲಿಡಬೇಕೆ ಬೇಡವೇ ಎಂದು ವೈದ್ಯರು ಸಮಾಲೋಚಿಸುತ್ತಿದ್ದಾಗ ವಾಸ್ತವದ ಅರಿವುಂಟಾಯಿತು ಎಂದು ಹೇಳಿದ್ದಾರೆ.

ಆರಂಭದಲ್ಲಿ ನಾನು ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದೆ. ಆದರೆ, ನನ್ನಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿದು ವೈದ್ಯರು ಆಸ್ಪತ್ರೆಗೆ ದಾಖಲಾಗಲೇ ಬೇಕು ಎಂದು ನನಗೆ ಒತ್ತಾಯಿಸಿದರು. ಅಂದು ಅವರು ಕೈಗೊಂಡ ನಿರ್ಧಾರ ಸರಿ ಇತ್ತು ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ಭಾವುಕರಾಗಿ ನುಡಿದರು.

Facebook Comments

Sri Raghav

Admin