‘ಮನಮೋಹನ್‍ಸಿಂಗ್ ಮತ್ತೆ ಪ್ರಧಾನಿಯಾಗ್ತಾರೆ’ : ಬಸವರಾಜು ಎಡವಟ್ಟು ಹೇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 23-ಮುಂದೆ ಮನಮೋಹನ್‍ಸಿಂಗ್ ಪ್ರಧಾನಿಯಾಗಲಿದ್ದಾರೆ ಎನ್ನುವ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಎಡವಟ್ಟಿನ ಹೇಳಿಕೆ ನೀಡಿ ಮುಜುಗರಕ್ಕೆ ಒಳಗಾಗಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅಭ್ಯರ್ಥಿಗಳ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರಿಗೆ ಮೋದಿ ಮುಂದಿನ ಪ್ರಧಾನಿ ಎಂದು ಹೇಳುವ ಭರದಲ್ಲಿ ಮನಮೋಹನ್‍ಸಿಂಗ್ ಮುಂದೆ ಪ್ರಧಾನಿಯಾಗುವರು ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಬಾಯಿತಪ್ಪಿನಿಂದ ಈ ಹೇಳಿಕೆ ನೀಡಿ ಮುಜುಗರಕ್ಕೆ ಒಳಗಾದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin