ಕ್ಲಸ್ಟರ್‍ಗಳಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಶ್ರಮವಹಿಸಲು ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.17- ಜಿಲ್ಲೆಗಳ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಪ್ರಮುಖ ಯೋಜನೆಯಾಗಿರುವ ಕಾಂಪೀಟ್ ವಿತ್ ಚೈನಾ ಯೋಜನೆ ಯಡಿ ಗುರುತಿಸಲಾದ ಜಿಲ್ಲೆಗಳಿಗೆ ಹೆಚ್ಚಿನ ಬಂಡವಾಳ ಹರಿದು ಬರುವಂತೆ ಶ್ರಮವಹಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿಯನ್ನು ಪಡೆದ ಅವರು, ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅಗತ್ಯವಾಗಿರುವ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ. ಅಲ್ಲದೆ, ಈ ಕ್ಲಸ್ಟರ್ ಆಧಾರಿತ ಯೋಜನೆಯಲ್ಲಿ ಬಂಡವಾಳ ಹೆಚ್ಚಾಗಿ ಹರಿದು ಬರುವಂತೆ ಮಾಡುವುದರಿಂದ ಉದ್ಯೋಗ ಸೃಷ್ಟಿ ಹಾಗೂ ರಾಜ್ಯದ ಅಭಿವೃದ್ದಿಗೆ ಬಲ ನೀಡಿದಂತಾಗುತ್ತದೆ.

ಈ ಕ್ಲಸ್ಟರ್‍ಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಹೂಡಿಕೆಗೆ ಇರುವ ಸಮಸ್ಯೆಗಳನ್ನು ಪರಿಹರಿಸಲು ತ್ವರಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅಲ್ಲದೆ, ಕೈಗಾರಿಕೆಗಳಿಗೆ ಬೇಕಾಗಿರುವ ಅಗತ್ಯ ಭೂಮಿ ಹಾಗೂ ಇನ್ನಿತರೆ ಅನುಮತಿಗಳನ್ನು ತ್ವರಿತವಾಗಿ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವಂತೆ ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣಾ ಹಾಗೂ ಕ್ಲಸ್ಟರ್‍ಗಳ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ