ಅನರ್ಹ ಶಾಸಕರು ಸೋತರೂ ಅಧಿಕಾರ : ಜಗದೀಶ್ ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಡಿ.9- ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಕಂಡರೂ ಅವರಿಗೆ ಅಧಿಕಾರ ಕೊಡುವುದು ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಉಪ ಚುನಾವಣೆ ಫಲಿತಾಂಶದ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ರಾಜೀನಾಮೆ ಕೊಟ್ಟಿದರಿಂದಲೇ ಬಿಜೆಪಿ ಸರ್ಕಾರ ಬಂದಿದ್ದು ಈ ಹಿನ್ನಲೆಯಲ್ಲಿ ಅನರ್ಹರಿಗೆ ನ್ಯಾಯ ದೊರಕಿಸಲಾಗುವುದು ಎಂದರು.

ಇನ್ನೂ ಉಪಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿ ಬರಲಿದ್ದು, 15 ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ. ಅಲ್ಲದೇ ಮತ ಎಣಿಕೆಗಳನ್ನು ನೋಡಿದರೆ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಭ್ರಮೆಯಲ್ಲಿಯೇ ಗೆಲುವು ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಜನರ ಒಲವು ಮಾತ್ರ ಬಿಜೆಪಿ ಕಡೆ ಇದ್ದು ಬಿಜೆಪಿ ಎಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook Comments