ಖಾತೆ ಬಗ್ಗೆ ಲಾಬಿ ಇಲ್ಲ : ಶೆಟ್ಟರ್ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಆ.21-ಖಾತೆ ಹಂಚಿಕೆ ವಿಚಾರದಲ್ಲಿ ಪಕ್ಷ ಮತ್ತು ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ಬದ್ದ ಎಂದು ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ನೂತನ ಸಚಿವರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಪರಿಹಾರ ಕಾರ್ಯಗಳು ನಿಂತಿಲ್ಲ.

ಯುದ್ದೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಅಲ್ಲದೇ ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ನೆರವು ನೀಡುವ ವಿಶ್ವಾಸವಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ವಿಷಯ ಇಲ್ಲದ ಕಾರಣ ಕಣ್ಣು ನೋವು ಅಂತಾ ಕ್ಷೇತ್ರಕ್ಕೆ ಭೈೀಟಿ ಕೊಟ್ಟಿಲ್ಲ ಹೀಗಾಗಿ ಅದನ್ನೇ ವಿಷಯ ಮಾಡಿಕೊಂಡಿದ್ದಾರೆ.

ನೆರೆ ಪೀಡಿತ ಪ್ರದೇಶಗಳ ವಸ್ತುಸ್ಥಿತಿ ತಿಳಿಯಲು ಧಾರವಾಡ ಜಿಲ್ಲೆಯಲ್ಲಿ ಇಂದು, ಮತ್ತು ಕಾರವಾರ ಜಿಲ್ಲೆಯಲ್ಲಿ ನಾಳೆ ಪ್ರವಾಸ ಕೈಗೊಂಡಿದ್ದೇನೆ. ಬಳಿಕ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಸಿ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು ಎಂದರು.ಮುಖಂಡರಾದ ನಾಗೇಶ, ಲಿಂಗರಾಜ ಪಾಟೀಲ, ಮಹೇಶ ಕೋಳಿವಾಡ, ಅರುಣ ಅಣ್ಣಿಗೇರಿ ಮುಂತಾದವರ ಭಾಗವಹಿಸಿದ್ದರು

Facebook Comments