ಭಿನ್ನರನ್ನು ವರಿಷ್ಠರು ಸಮಾಧಾನ ಪಡಿಸಲಿದ್ದಾರೆ : ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ, ಜ.14- ಭಿನ್ನರನ್ನು ಸಮಾಧಾನಪಡಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡಲಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೇಳುವುದು ಸಾಮಾನ್ಯ. ಅವರನ್ನು ಸಮಾಧಾನಪಡಿಸುವ ಕೆಲಸವನ್ನು ಹೈಕಮಾಂಡ್ ಮಾಡಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವುದು ಸಿಎಂ ಪರಮಾಧಿಕಾರ. ಬಹಿರಂಗ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಅವರು ಹೇಳಿದ್ದಾರೆ.

ಹೆಚ್.ವಿಶ್ವನಾಥ್ ಅವರು ಸಿಡಿ ಬಹಿರಂಗಪಡಿಸುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೆಟ್ಟರ್ ಅವರು ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ ಅವನ್ನು ಪಕ್ಷದ ವರಿಷ್ಠರ ಜತೆ ಚರ್ಚೆ ಮಾಡಬೇಕು. ಬಹಿರಂಗವಾಗಿ ಚರ್ಚಿಸಬಾರದು. ಅಸಮಾಧಾನಗೊಂಡವರಿಗೆ ಸೂಕ್ತ ಸ್ಥಾನಮಾನ ಹೈಕಮಾಂಡ್ ನೀಡಲಿದೆ ಎಂಬ ಭರವಸೆ ಇದೆ. ಎಂಥದ್ದೇ ಅಸಮಾಧಾನವಿದ್ದರೂ ಅದನ್ನು ನಿವಾರಿಸುವ ಸಾಮಥ್ರ್ಯ ಪಕ್ಷಕ್ಕಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.

Facebook Comments