“ಬಿಎಸ್ವೈ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಬಳಿಕೆದಾರರಿಗೆ ಅನುಕೂಲ ಮಾಡಿಕೊಟ್ಟಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.27- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಭೂಮಿ ಕಬಳಿಕೆದಾರರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಜಯರಾಮ್ ರಮೇಶ್ ಆರೋಪಿಸಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರವನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಜೈರಾಮ್ ರಮೇಶ್ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರೈತರು ಮತ್ತು ಕೃಷಿ ಕಾರ್ಮಿಕರ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರು ಭೂ ಸುಧಾರಣಾ ಕಾಯ್ದೆಯ ಮೂಲಕ ರಿಯಲ್ ಎಸ್ಟೇಟ್ ಮಾಫೀಯಾಗೆ ಮತ್ತು ಭೂಮಿ ಕಬಳಿಸುವ ಶಾರ್ಕ್‍ಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸುಮಾರು ದಶಕಗಳಿಂದ ರೈತರ ಹಿತ ರಕ್ಷಣೆ ಮಾಡಿದ ಕಾಯ್ದೆಯನ್ನು ದುರ್ಬಲಗೊಳಿಸಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಒತ್ತಾಯದಂತೆ ಪ್ರಧಾನ ಮಂತ್ರಿ ಅವರು ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ತಡೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಬೆಂಬಲ ವ್ಯಕ್ತಪಡಿಸಿರುವುದರಿಂದ ಸಿದ್ದರಾಮಯ್ಯ ಅವರಿಗೆ ಆನೆ ಬಲ ಬಂದಂತಾಗಿದೆ.

Facebook Comments

Sri Raghav

Admin