ರಾಜ್ಯಸಭೆ ಆಯ್ಕೆ ತಕರಾರು : ಸುಪ್ರೀಂನಲ್ಲಿ ಜೈ ಶಂಕರ್ ಕೇವಿಯಟ್ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.13- ರಾಜ್ಯಸಭೆ ಆಯ್ಕೆ ವಿಷಯದಲ್ಲಿ ಉದ್ಭವಿಸಿರುವ ತಕರಾರಿಗೆ ಸಂಬಂಧಿಸಿರುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ ಜುಲೈನಲ್ಲಿ ಗುಜರಾತ್‍ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ನಿನ್ನೆ ಸುಪ್ರೀಂಕೋರ್ಟ್‍ನಲ್ಲಿ ಕೇವಿಯೆಟ್ ಹಾಕಿದ್ದಾರೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ. ಡಾ.ಜೈ ಶಂಕರ್ ಅವರ ಚುನಾವಣೆ ಆಯ್ಕೆ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಸಲ್ಲಿಸಿದ್ದ ಅರ್ಜಿಯನ್ನು 2020ರ ಫೆ.4ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.

ಸುಪ್ರೀಂಕೋರ್ಟ್‍ನಲ್ಲಿ ರಾಜ್ಯಸಭೆ ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು. ಈ ವಿಷಯದಲ್ಲಿ ಸುಪ್ರೀಂಕೋರ್ಟ್ ಕೈಗೊಳ್ಳಬಹುದಾದ ತೀರ್ಮಾನ ಕುತೂಹಲ ಕೆರಳಿಸಿದೆ.

Facebook Comments