ಬಿಜೆಪಿ ಪಂಚಾಯತ್ ಸದಸ್ಯನನ್ನು ಹತ್ಯೆ ಮಾಡಿದ ಉಗ್ರರು..?

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಆ.24- ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ನಡುವಿನ ಹಿಂಸಾಚಾರದಲ್ಲಿ ನಾಪತ್ತೆಯಾಗಿದ್ದ ಬಿಜೆಪಿಯ ಪಂಚಾಯತ್ ಸದಸ್ಯನನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಆಡಿಯೋ ಕ್ಲಿಪ್‍ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೀಗ ಕೆಲವು ಉಗ್ರರು ಪಂಚಾಯತ್ ಸದಸ್ಯನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಜಮ್ಮುಕಾಶ್ಮೀರದ ಸೋಪಿಯಾನ್ ಜಿಲ್ಲೆಯ ಚಕೂರಾ ಪ್ರದೇಶದಿಂದ ಪಂಚಾಯತ್ ಸದಸ್ಯರು ನಾಪತ್ತೆಯಾಗಿದ್ದರು. ಈ ಬಗ್ಗೆ ಬಿಡುಗಡೆಯಾಗಿರುವ ಆಡಿಯೋ ಕ್ಲಿಪ್‍ನ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳಿನಿಂದ ರಾಜಕೀಯ ಕಾರ್ಯಕರ್ತರ ಮೇಲೆ ಸರಣಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು, ಈ ತಿಂಗಳ ಆರಂಭದಲ್ಲಿ ಮಧ್ಯ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಪಕ್ಷದ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಇದರಿಂದ ತಮ್ಮ ಪ್ರಾಣಕ್ಕೆ ಸಂಚಕಾರವಿದೆ ಎಂದು ಹೆದರಿ 17 ಮಂದಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದರು. ಪಕ್ಷದ ಕಾರ್ಯಕರ್ತರ ಪ್ರಾಣಕ್ಕೆ ಅಪಾಯವಿದೆ.

ಹಾಗಾಗಿ ಜಮ್ಮುಕಾಶ್ಮೀರದ ಪ್ರತಿ ಜಿಲ್ಲೆಯಲ್ಲಿರುವ ಕಾರ್ಯಕರ್ತರಿಗೆ ಸುರಕ್ಷಿತ ಅಪಾರ್ಟ್‍ಮೆಂಟ್‍ಗಳನ್ನು ನೀಡಬೇಕೆಂದು ಕೋರಿ ರಾಜ್ಯ ಬಿಜೆಪಿ ಕೇಂದ್ರ ನಾಯಕರಿಗೆ ಪತ್ರ ಬರೆದಿತ್ತು.

Facebook Comments

Sri Raghav

Admin