ಜವಹಾರ್ ನವೋದಯ ವಿದ್ಯಾಲಯದ ವಸತಿ ಶಾಲೆಯಲ್ಲಿ 40 ಮಂದಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಡಿ.5- ಜಿಲ್ಲಾಯ ಜವಾಹರ್ ನವೋದಯ ವಿದ್ಯಾಲಯದ ವಸತಿ ಶಾಲೆಯಲ್ಲಿರುವ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಗೋಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸೋಂಕು ಸೋಟಗೊಂಡಿದ್ದು, ಶಿಕ್ಷಣ ಸಂಸ್ಥೆಯನ್ನು ಸೀಲ್ಡೌನ್ ಮಾಡಲಾಗಿದೆ.

ಮೂವರು ವಿದ್ಯಾರ್ಥಿಗಳು, 4 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ವಸತಿ ಶಾಲೆಯಲ್ಲಿದ್ದ 418 ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅವರಲಿ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಂಕಿತ ವಿದ್ಯಾರ್ಥಿಗಳು, ಸಿಬ್ಬಂದಿಗೆ ರೋಗ ಲಕ್ಷಣಗಳಿಲ್ಲ. ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ವ್ಯವಸ್ಥೆ ಮಾಡಿದೆ. ವಸತಿ ಶಾಲೆಯಲ್ಲಿ ಚಿಕಿತ್ಸೆ ಹಾಗೂ ನಿಗಾವಣೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಈ ಮೊದಲು ಧಾರವಾಡದ ಶಿಕ್ಷಣ ಸಂಸ್ಥೆಗಳಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದವು. ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.

ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೂ ಮುಕ್ತ ಅವಕಾಶ ನೀಡಲಾಗಿದೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವುದರಿಂದ ಸೋಂಕು ತಗಲುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿತ್ತು. ಒಂದು ವೇಳೆ ಸೋಂಕು ತಗುಲಿದರೂ ಅಪಾಯದ ಮಟ್ಟ ತಲುಪುವ ಸಾಧ್ಯತೆಗಳು ಕ್ಷೀಣ ಎಂಬ ಧೈರ್ಯದ ಮೇಲೆ ಓಮೈಕ್ರಾನ್ ಆತಂಕದ ನಡುವೆಯೂ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಕೆಗಳನ್ನುಮುಂದುವರೆಸಲಾಗಿದೆ.

Facebook Comments