ನೆಹರು ಪುಣ್ಯ ತಿಥಿ: ಪ್ರಥಮ ಪ್ರಧಾನಿಗೆ ಗಣ್ಯರ ಶ್ರದ್ಧಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 27-ಭಾರತದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್‍ಲಾಲ್ ನೆಹರು ಅವರ 56ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷೆ ಸೋನಿಯಾಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೆಹರು ಅವರ ಪುಣ್ಯಸ್ಮರಣೆ ಸಂದರ್ಭದಲ್ಲಿ ಮೋದಿ ಅವರು ಮೈಕ್ರೋ ಬ್ಲಾಗಿಂಗ್‍ನಲ್ಲಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

ದೆಹಲಿಯ ಶಾಂತಿ ವನದಲ್ಲಿರುವ ನೆಹರು ಸಮಾಧಿಗೆ ತೆರಳಿದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಿದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ಪಂಡಿತ್ ನೆಹರು ಆಗ 15, 1947ರಂದು ಮೇ 1964ರವರೆಗೆ ಪ್ರಧಾನಮಂತ್ರಿಯಾದರು. ಇವರನ್ನು ಆಧುನಿಕ ಭಾರತದ ಶಿಲ್ಪಿ ಎಂದು ಕರೆಯಲಾಗುತ್ತದೆ.

Facebook Comments