ಅಧಿಕಾರ ಕಳೆದುಕೊಳ್ಳುವ ಹತಾಶೆಯಿಂದ ಮಮತಾ ಪತ್ರ ಬರೆದಿದ್ದಾರೆ : ಜಾವ್ಡೇಕರ್ ಲೇವಡಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.1- ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕಳೆದುಕೊಳ್ಳುವ ಹತಾಶೆಯಿಂದಾಗಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವ್ಡೇಕರ್ ಲೇವಡಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಮಮತಾ ಬ್ಯಾನರ್ಜಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸೋಲುವ ಜತೆಗೆ ಪಶ್ಚಿಮ ಬಂಗಾಳದಲ್ಲಿ ಅವರ ಪಕ್ಷ ತೃಣಮೂಲ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ. ಹೀಗಾಗಿ ಹತಾಶರಾಗಿರುವ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಪಕ್ಷಗಳಿಗೆ ಪತ್ರ ಬರೆದಿದ್ದಾರೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷ ಮಮತಾ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಆದರೂ ಅವರು ಕಾಂಗ್ರೆಸ್ ಪಕ್ಷಕ್ಕೇ ಪತ್ರ ಬರೆದು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

Facebook Comments