ಬಂದ್‍ಗೆ ಜಯ ಕರ್ನಾಟಕ ಸಂಘಟನೆ ಬೆಂಬಲವಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.11- ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಫೆ.13ರಂದು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಸೈದ್ಧಾಂತಿಕವಾಗಿ ನಮ್ಮ ಬೆಂಬಲವಿದೆಯೇ ಹೊರತು ಬಂದ್‍ಗೆ ಬೆಂಬಲವಿಲ್ಲ ಎಂದು ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಬೇಕು ಮತ್ತು ಸರ್ಕಾರ ಇದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಸಂಘಟನೆಯ ಒತ್ತಾಯವಾಗಿದೆ. ಸರೋಜಿನಿ ಮಹಿಷಿ ವರದಿ ಜಾರಿಗೆ ನಾವು ಕೂಡ ಒಕ್ಕೊರಲಿನಿಂದ ಬೆಂಬಲ ಸೂಚಿಸಿದ್ದೇವೆ. ಆದರೆ ಬಂದ್ ಮಾಡುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದರಿಂದ ಸಂಘಟನೆ ಇದಕ್ಕೆ ಬೆಂಬಲ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ನಮ್ಮ ನಿರಂತರ ಹೋರಾಟವಿರುತ್ತದೆ. ಜಯ ಕರ್ನಾಟಕ ಸಂಘಟನೆ ಮತ್ತಷ್ಟು ಕ್ರಿಯಾಶೀಲವಾಗಿ ಜನಪರವಾಗಿ ನಿಲ್ಲಲಿದೆ ಎಂದು ಜಗದೀಶ್ ತಿಳಿಸಿದ್ದಾರೆ.

Facebook Comments