ಜಯಲಲಿತಾ ಸಾವು ಪ್ರಕರಣ : ತನಿಖಾ ಆಯೋಗದ ವಿಚಾರಣೆಗೆ ಸುಪ್ರೀಂ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.26-ಚೆನ್ನೈನ ಅಫೋಲೊ ಆಸ್ಪತ್ರೆಯಲ್ಲಿ ತಮಿಳುನಾಡಿನ ಆಗಿನ ಮುಖ್ಯಮಂತ್ರಿ ಜೆ. ಜಯಲಲಿತಾ ಮೃತಪಟ್ಟ ಸಂಗತಿ ಕುರಿತು ರಚಿಸಲಾಗಿದ್ದ ತನಿಖಾ ಆಯೋಗದ ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದೆ. ಇದರಿಂದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಆಸ್ಪತ್ರೆಗೆ ಬಿಗ್ ರಿಲೀಫ್ ಲಭಿಸಿದಂತಾಗಿದೆ.

2016ರಲ್ಲಿ ಎಐಎಡಿಎಂಕೆ ನಾಯಕಿ ಜಯಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣದ ಬಗ್ಗೆ ತನಿಖೆ ಮುಂದುವರಿಯುವುದಕ್ಕೆ ಅಫೋಲೊ ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏ.4ರಂದು ಆಸ್ಪತ್ರೆಯ ಆಕ್ಷೇಪಣೆಯನ್ನು ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆಸ್ಪತ್ರೆಗೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಜಯಲಲಿತಾ ಸಾವು ಕುರಿತು ರಚಿಸಲಾಗಿದ್ದ ತನಿಖಾ ಆಯೋಗದ ಮುಂದಿನ ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದೆ.

ತನಿಖಾ ಆಯೋಗದ ಮುಂದಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನೂ ಒಳಗೊಂಡ ಪೀಠವು ತಿಳಿಸಿದೆ.

ಅಫೋಲೊ ಆಸ್ಪತ್ರೆಯಲ್ಲಿ ಡಿಸೆಂಬರ್ 5, 2ಂ16ರಂದು ಜಯಲಲಿತಾ ಸಾವಿಗೆ ಕಾರಣವಾದ ಸನ್ನಿವೇಶಗಳ ಬಗ್ಗೆ ತನಿಖೆ ನಡೆಸಲು ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರ ತನಿಖಾ ಆಯೋಗವನ್ನು ರಚಿಸಿತ್ತು. ಈ ಆಯೋಗ ತನ್ನ ತನಿಖೆಯನ್ನು ಮುಂದುವರಿಸಿತ್ತು.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ