ಸರ್ಕಾರದ ಆದೇಶದಂತೆ ಟಿಪ್ಪು ಜಯಂತಿ ಆಚರಿಸಲಾಗುತ್ತೆ : ಜಯಮಾಲಾ

ಈ ಸುದ್ದಿಯನ್ನು ಶೇರ್ ಮಾಡಿ

Jayamala--01

ಹಾಸನ, ನ.4-ಸರ್ಕಾರದ ಆದೇಶದಂತೆ ನ.10 ರಂದು ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಯಮಾಲಾ ತಿಳಿಸಿದರು. ಶಕ್ತಿ ದೇವತೆ ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆ ಸಂಬಂಧ ಸರ್ಕಾರದ ಆದೇಶವಿದೆ. ಈ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿಯವರು ವಿರೋಧಿಸುತ್ತಿದ್ದರಲ್ಲ ಎಂಬ ವರದಿಗಾರರ ಪ್ರಶ್ನೆಗೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಯಾವುದೇ ಒಂದು ಆಚರಣೆಗೆ ಪ್ರಾರಂಭದಲ್ಲಿ ವಿರೋಧ ಬರುವುದು ಸಹಜ. ಟಿಪ್ಪು ಜಯಂತಿ ಏಕೆ ಇಷ್ಟೊಂದು ವಿವಾದಕ್ಕೆ ಒಳಗಾಗಿದೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದರು.

ನಟಿ ಶ್ರುತಿಹರಿಹರನ್, ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಮಿ ಟೂ ಆರೋಪಕ್ಕೆ ಪ್ರತಿಕ್ರಿಯಿಸಿದ ಜಯಮಾಲಾ, ಹೆಣ್ಣನ್ನು ಪದೇ ಪದೇ ಮುಜುಗರಕ್ಕೀಡು ಮಾಡುವ ಯತ್ನ ನಡೆಯುತ್ತಿದೆ. ಅಷ್ಟೇ ಅಲ್ಲ, ಪುರುಷರು ಕೂಡ ಮುಜುಗರಕ್ಕೀಡಾಗುತ್ತಾರೆ. ಇದರ ಬಗ್ಗೆ ಅವರವರೇ ತೀರ್ಮಾನ ಮಾಡಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

Facebook Comments